ಶಾಸಕ ರೇಣುಕಾಚಾರ್ಯ ಸಹೋದರನ ಮಗನ ಸಾವು ಪ್ರಕರಣ – ವಿನಯ್ ಗುರೂಜಿಯಿಂದ ಮಾಹಿತಿ ಕಲೆ ಹಾಕಿದ ಪೊಲೀಸರು

ದಾವಣಗೆರೆ (Davangere) ಯ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ (Renukarcharya) ತಮ್ಮನ ಮಗ ಚಂದ್ರಶೇಖರ್ (Chandrashekar) ಸಾವಿನ ತನಿಖೆ ನಡೆಸುತ್ತಿರುವ ಪೊಲೀಸರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ.

ದಾವಣಗೆರೆ (Davangere) ಯ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ (Renukarcharya) ತಮ್ಮನ ಮಗ ಚಂದ್ರಶೇಖರ್ (Chandrashekar) ಸಾವಿನ ತನಿಖೆ ನಡೆಸುತ್ತಿರುವ ಪೊಲೀಸರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ (Vinay guruji) ಆಶ್ರಮಕ್ಕೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ.

ಇನ್ನೇನು ಸ್ವಲ್ಪ ಹೊತ್ತಿನಲ್ಲಿ ಮನೆಗೆ ತಲುಪಬೇಕೆನ್ನುವಷ್ಟರಲ್ಲಿ ಕಳೆದ ಗುರುವಾರ ಮಧ್ಯಾಹ್ನ ಹೊನ್ನಾಳಿ-ನ್ಯಾಮತಿ ನಡುವೆ ಬರುವ ತುಂಗಾ ಮೇಲ್ದಂಡೆ ನಾಲೆಗೆ ಕಾರು ಬಿದ್ದಿದೆ. ಚಂದ್ರಶೇಖರ್ ನಾಪತ್ತೆಯಾದ 5 ದಿನಗಳ ನಂತರ ಚಂದ್ರಶೇಖರ್ ಮೃತದೇಹ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಶಾಸಕ ರೇಣುಕಾಚಾರ್ಯ ಮತ್ತು ಕುಟುಂಬಸ್ಥರು ಕಾರು ಅಪಘಾತಕ್ಕೀಡಾಗಿದ್ದಲ್ಲ, ವ್ಯವಸ್ಥಿತ ಸಂಚು ನಡೆಸಿ ಚಂದ್ರಶೇಖರ್ ನನ್ನು ಕೊಲೆ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದು ನಿನ್ನೆ ವಿನಯ್ ಗುರೂಜಿ ಆಶ್ರಮಕ್ಕೆ ತೆರಳಿ ಗುರೂಜಿ ಬಳಿ ಹೇಳಿಕೆ ಮತ್ತು ಮಾಹಿತಿ ಸಂಗ್ರಹಿಸಿದ್ದಾರೆ. ಪೊಲೀಸರು ಕೇಳಿದ ಪ್ರಶ್ನೆಗಳಿಗೆಲ್ಲಾ ವಿನಯ್ ಗುರೂಜಿಯವರು ಉತ್ತರಿಸಿದ್ದು, ಆಶ್ರಮಕ್ಕೆ ರಾತ್ರಿ ಹೊತ್ತು ಬಂದಿದ್ದರು, ಅವರಲ್ಲಿ ಹೆಚ್ಚು ಮಾತನಾಡಿರಲಿಲ್ಲ. ಇಷ್ಟು ತಡವಾಗಿ ಏಕೆ ಬಂದಿರಿ, ಇದು ಬರುವ ಹೊತ್ತೇ ಎಂದು ಕೇಳಿದ್ದೆ. ಹುಷಾರಾಗಿ ಹೋಗಿ ಎಂದು ಹೇಳಿ ಕಳುಹಿಸಿದ್ದೆ, ಘಟನೆ ಬಗ್ಗೆ ನನಗೂ ನೋವಿದೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : – ಸೋನಿಯಾಗಾಂಧಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ತ್ಯಾಗ ಮಾಡಿದ್ದಾರೆ – ಡಿ.ಕೆ ಶಿವಕುಮಾರ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!