ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆಗೊಳಿಸಿದ ಮೋದಿ

ಬೆಂಗಳೂರಿನ ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆ (Kempegowda statue) ಯನ್ನು ಪ್ರಧಾನಿ ನರೇಂದ್ರ ಮೋದಿ (Narendra modi) ಲೋಕಾರ್ಪಣೆ ಮಾಡಿದ್ದಾರೆ. 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿದ್ದು ಇದಕ್ಕೆ ಪ್ರಗತಿಯ ಪ್ರತಿಮೆ ಎಂದು ಕರ್ನಾಟಕ ಸರ್ಕಾರ ನಾಮಕರಣ ಮಾಡಿದೆ.

ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸೇರಿ ದಾಖಲೆ ನಿರ್ಮಿಸಿರುವ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ ಬಳಿಕ ಪ್ರತಿಮೆಗೆ ವಂದನೆ ಸಲ್ಲಿಸಿದರು. ಈ ಪ್ರತಿಮೆ ನಿರ್ಮಾಣಕ್ಕೆ 84 ಕೋಟಿ ರೂ. ಖರ್ಚು ಮಾಡಲಾಗಿದ್ದು, ಪ್ರತಿಮೆಯ ಖಡ್ಗ ವೇ 4 ಸಾವಿರ ಕೆಜಿ ತೂಕ ಹೊಂದಿದೆ. 120 ಟನ್ ಉಕ್ಕನ್ನು ಪ್ರತಿಮೆ ನಿರ್ಮಾಣಕ್ಕೆ ಬಳಕೆ ಮಾಡಲಾಗಿದೆ. 98 ಟನ್ ಕಂಚನ್ನು ಬಳಕೆ ಮಾಡಲಾಗಿದೆ. ಪ್ರತಿಮೆ ಸುತ್ತಲಿನ ಸ್ಥಳದಲ್ಲಿ ಥೀಮ್ ಪಾರ್ಕ್ ಅಭಿವೃದ್ಧಿಪಡಿಸಲಾಗಿದೆ.

ಇದನ್ನೂ ಓದಿ : – ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2 ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!