ಇದೇ ಮೊದಲ ಬಾರಿಗೆ ಇಂದು ಸೂರ್ಯಾಸ್ತದ ಬಳಿಕ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಕೆಂಪು ಕೋಟೆಯಲ್ಲಿ ಭಾಷಣ ಮಾಡಲಿದ್ದಾರೆ. ಗುರು ತೇಜ್ ಬಹಾದ್ದೂರ್ ಅವರ 400ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 9:30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮೋದಿ ಕೆಂಪು ಕೋಟೆಯ ಮೇಲೆ ಭಾಷಣ ಮಾಡದೇ ಹುಲ್ಲುಹಾಸಿನ ಮೇಲೆ ಮಾತನಾಡುತ್ತಿರುವುದು ಇಂದಿನ ಕಾರ್ಯಕ್ರಮದ ವಿಶೇಷವಾಗಿದೆ. 2018ರಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಅಜಾದ್ ಹಿಂದ್ ಸರ್ಕಾರ ರಚನೆಯ 75ನೇ ವರ್ಷಾಚರಣೆ ಅಂಗವಾಗಿ ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿದ್ದ ಮೋದಿ ಬೆಳಗ್ಗೆ 9 ಗಂಟೆಗೆ ಭಾಷಣ ಮಾಡಿದ್ದರು.
ಇಂದು ರಾತ್ರಿ 400 ಸಿಖ್ ಸಂಗೀತಗಾರಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮೋದಿ ಅವರು ಅಂಚೆ ಸ್ಟಾಂಪ್ ಮತ್ತು ಸ್ಮರಣಾರ್ಥ ನಾಣ್ಯಗಳನ್ನು ಬಿಡುಗಡೆ ಮಾಡಲಿದ್ದಾರೆ.
ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 11 ಮುಖ್ಯಮಂತ್ರಿಗಳು ಸೇರಿದಂತೆ ರಾಷ್ಟ್ರದ ವಿವಿಧೆಡೆಯಿಂದ ಸಿಖ್ ಪ್ರಮುಖರು ಭಾಗಿಯಾಗಲಿದ್ದಾರೆ. 400 ಸಿಖ್ ಜಥೆದಾರ್ ಕುಟುಂಬಗಳಿಗೆ ವಿಶೇಷ ಆಹ್ವಾನ ನೀಡಲಾಗಿದೆ.
ಇದನ್ನೂ ಓದಿ :- ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಸುಪ್ರೀಂ ಆದೇಶದ ಪ್ರತಿ ಹಿಡಿದು ಜೆಸಿಬಿ ತಡೆದ ಬೃಂದಾ ಕಾರಟ್!