‘ಅಮ್ಮಾ, ಜಗತ್ತು ಏನು ಬೇಕಾದರೂ ಹೇಳಿಕೊಳ್ಳಲಿ, ನೀವು ಪ್ರೀತಿಗಾಗಿ ಎಲ್ಲವನ್ನೂ ಮಾಡಿದ್ದೀರಿ – ಪ್ರಿಯಾಂಕಾ ವಾದ್ರಾ ಭಾವನಾತ್ಮಕ ಪೋಸ್ಟ್

ಸೋನಿಯಾ ಗಾಂಧಿ (Sonia gandhi) ಮಲ್ಲಿಕಾರ್ಜುನ ಖರ್ಗೆ (Mallikarjun kharge) ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಿದ ಕೆಲವೇ ಗಂಟೆಗಳಲ್ಲಿ, ಪುತ್ರಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka gandhi vadra) ಭಾವನಾತ್ಮಕ ಪೋಸ್ಟ್‌ ಹಾಕಿದ್ದಾರೆ.

ಸೋನಿಯಾ ಗಾಂಧಿ (Sonia gandhi) ಮಲ್ಲಿಕಾರ್ಜುನ ಖರ್ಗೆ (Mallikarjun kharge) ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಿದ ಕೆಲವೇ ಗಂಟೆಗಳಲ್ಲಿ, ಪುತ್ರಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka gandhi vadra) ಭಾವನಾತ್ಮಕ ಪೋಸ್ಟ್‌ ಹಾಕಿದ್ದಾರೆ. ಪಕ್ಷ ಸಂಘಟನೆಯಲ್ಲಿ ತಾಯಿಯ ಪಾತ್ರವನ್ನು ಕೊಂಡಾಡಿರುವ ಪ್ರಿಯಾಂಕಾ, ಎಲ್ಲವನ್ನು ಪ್ರೀತಿಗಾಗಿ ಮಾಡಿದ ನಿಮ್ಮ ಸೇವೆಯನ್ನು ಕಾಂಗ್ರೆಸ್‌ ಪಕ್ಷ ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

ಅಮ್ಮಾ, ಜಗತ್ತು ಏನು ಬೇಕಾದರೂ ಹೇಳಿಕೊಳ್ಳಲಿ, ಅಥವಾ ಜಗತ್ತು ಏನು ಬೇಕಾದರೂ ಯೋಚಿಸಲಿ, ಆದರೆ ನನಗೆ ಗೊತ್ತು. ನೀವು ಪ್ರೀತಿಗಾಗಿ ಎಲ್ಲವನ್ನೂ ಮಾಡಿದ್ದೀರಿ.” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಾಯಿ ಸೋನಿಯಾ ಗಾಂಧಿ ಅವರನ್ನು ಉಲ್ಲೇಖಿಸಿ ಭಾವನಾತ್ಮಕ ಪೋಸ್ಟ್‌ ಮಾಡಿದ್ದಾರೆ. ಪಕ್ಷಕ್ಕಾಗಿ ನೀವು ಹಲವಾರು ವರ್ಷಗಳಿಂದ ದಣಿವರಿಯದೇ ದುಡಿದಿದ್ದೀರಿ. ವೈಯಕ್ತಿಕ ಜೀವನದ ನೋವನ್ನು ಎಂದಿಗೂ ಬಹಿರಂಗವಾಗಿ ತೋರ್ಪಡಿಸಿಕೊಳ್ಳದೇ, ಸದಾ ನಗುಮುಖದಿಂದಲೇ ನಿಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ್ದೀರಿ. ಪಕ್ಷಕ್ಕಾಗಿ ನೀವು ಮಾಡಿರುವ ಸೇವೆಯನ್ನು ನಾವು ಸದಾ ಸ್ಮರಿಸುತ್ತೇವೆ ಎಂದು ಸೋನಿಯಾ ಗಾಂಧಿ ಕುರಿತು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ನಿಮ್ಮ ನಾಯಕತ್ವದಲ್ಲಿ ಪಕ್ಷವು ಅತ್ಯಂತ ಸದೃಢವಾಗಿ ಬೆಳೆದಿದೆ. ಎರಡು ಬಾರಿ ಸರ್ಕಾರ ರಚಿಸಿ ದೇಶದ ಪ್ರಗತಿಗೆ ಕೊಡುಗೆ ನೀಡಿದೆ. ಪಕ್ಷವು ಇನ್ನು ಮುಂದೆಯೂ ನಿಮ್ಮ ಮಾರ್ಗದರ್ಶನದಲ್ಲಿ ದೇಶದ ಒಳಿತಿಗಾಗಿ ದುಡಿಯಲಿದೆ. ನೀವು ತೋರಿದ ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಅವರು ಸೋನಿಯಾ ಗಾಂಧಿ ಅವರಿಗೆ ವಾಗ್ದಾನ ಮಾಡಿದ್ದಾರೆ.

ಇದನ್ನೂ ಓದಿ : – ವಿಶ್ವಕಪ್ ನಲ್ಲಿರೋ ಆಟಗಾರರಿಗೆ ಸರಿಯಾಗಿ ಊಟ ಸಿಗ್ತಿಲ್ಲ – ಟೀಂ ಇಂಡಿಯಾ ಬೇಸರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!