ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ (National herald newspaper) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿಚಾರಣೆಯನ್ನು ಸೋಮವಾರಕ್ಕೆ (Monday) ಮುಂದೂಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul gandhi) ಜಾರಿ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದಾರೆ.
ಸಂಸದ ರಾಹುಲ್ ಗಾಂಧಿಯನ್ನು ಸೋಮವಾರದಿಂದ ಮೂರು ದಿನ 30 ಗಂಟೆಗಳಿಗೂ ಹೆಚ್ಚು ಸಮಯ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ ಮತ್ತೆ ವಿಚಾರಣೆಗೆ ಬರುವಂತೆ ಸಮನ್ಸ್ ನಿಡಲಾಗಿದೆ. ಕೋವಿಡ್ (covid) ಸಂಬಂಧಿ ಸಮಸ್ಯೆಗಳ ಕಾರಣ ದಿಲ್ಲಿಯ (Delhi) ಗಂಗಾ ರಾಮ್ ಆಸ್ಪತ್ರೆಯಲ್ಲಿ (Gangaram hospital) ಚಿಕಿತ್ಸೆ ಪಡೆಯುತ್ತಿರುವ ತಮ್ಮ ತಾಯಿ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Soniya gandhi) ಜತೆ ಇರಲು ಅವಕಾಶ ನೀಡುವಂತೆ ಮನವಿ ಮಾಡಿದ್ದ ಕಾರಣ ಅವರಿಗೆ ಇವತ್ತು ಒಂದು ದಿನದ ವಿರಾಮ ಕೊಡಲಾಗಿತ್ತು.
ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ (Priyanka gandhi) ವಾದ್ರಾ ಇಬ್ಬರೂ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಅವರ ಜತೆ ಇದ್ದಾರೆ. ಸೋಮವಾರದವರೆಗೂ ತಾಯಿಯ ಜತೆ ಇರಲು ಅವಕಾಶ ನೀಡುವಂತೆ ಕೋರಿ ರಾಹುಲ್ ಗಾಂಧಿ ಇ.ಡಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕೋವಿಡ್ ಸಂಬಂಧಿ ಆರೋಗ್ಯ ಸಮಸ್ಯೆಗಳ ಕಾರಣ ಭಾನುವಾರ ದಿಲ್ಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ : – ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಂಆರ್ ಶಾಗೆ ಹೃದಯಾಘಾತ- ದಿಲ್ಲಿಗೆ ಏರ್ ಲಿಫ್ಟ್