ಜಪಾನ್ ಕಂಪನಿಗಳಿಗೆ ಹೂಡಿಕೆ ಹೆಚ್ಚಿಸಲು ಮನವಿ ಮಾಡಿದ ಮುರುಗೇಶ್ ನಿರಾಣಿ

ನವೆಂಬರ್ ( novemeber ) ತಿಂಗಳಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಹಿನ್ನೆಲೆಯಲ್ಲಿ ಸಿದ್ಧತೆಗಳು ಬರದಿಂದ ಸಾಗುತ್ತಿದ್ದು, ವಿದೇಶಿ ಗಣ್ಯರಿಗೆ ಅಹ್ವಾನ ನೀಡಲಾಗುತ್ತಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ್ ಆರ್ ನಿರಾಣಿ ( MURUGESH NIRANI ) ಮತ್ತು ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ( GUJAN KRISHNA ) ಅವರು ಜಪಾನ್ ಮೂಲದ ಮಿಟ್ಸುಯಿ ಕಂಪನಿ ಅಧಿಕಾರಿಗಳನ್ನು ಟೋಕಿಯೋದಲ್ಲಿ ಇಂದು ಭೇಟಿಯಾಗಿದ್ದಾರೆ.

ನವೆಂಬರ್ 2 ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಔಪಚಾರಿಕ ಆಹ್ವಾನ ನೀಡಿದರು.

ಜತೆಗೆ, ಕರ್ನಾಟಕದಲ್ಲಿ ಹೆಚ್ಚುವರಿ ಹೂಡಿಕೆ ಮಾಡುವಂತೆ ಅವರಲ್ಲಿ ಕೋರಿದ್ದಾರೆ. ಈ ಸಂದರ್ಭದಲ್ಲಿ ಮಿಟ್ಸುಯಿ ಕಂಪನಿಯ ಉಪ ವ್ಯವಸ್ಥಾಪಕ ನಿರ್ದೇಶಕರು, ವ್ಯವಸ್ಥಾಪ ಯೂ, ನಿರ್ದೇಶಕ ಸೈಯದ್ ಫೈಸಲ್ ಅಶ್ರಫ್ ಉಪಸ್ಥಿತರಿದ್ದರು.

 ಇದನ್ನೂ ಓದಿ : – ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಮತ್ತೆ ಇಬ್ಬರ ಬಂಧನ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!