ಚಾಮುಂಡಿ ಬೆಟ್ಟ(CHAMUNDI HILLS) ಕ್ಕೆ ರೋಪ್ ವೇ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಕೈಬಿಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪರಿಸರವಾದಿಗಳಿಗೆ ಜಯ ಸಿಕ್ಕಂತಾಗಿದೆ. ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೇಡ ಎಂಬ ಅಭಿಪ್ರಾಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಂದ ವ್ಯಕ್ತವಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್(S.T SOMSHEKHAR) ಹೇಳಿದ್ದಾರೆ.
ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬಗ್ಗೆ ಪ್ರಸ್ತಾಪಿಸಿದ್ದರು. ಈ ಸಂಬಂಧ ಇಂದು ನಡೆದ ಸಭೆಯಲ್ಲಿ ರೋಪ್ ವೇ ಬೇಡ ಎಂಬ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದ್ರು. ಇದನ್ನು ಓದಿ : – ಪಿಯುಸಿ ಕಾಲೇಜು ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ
ಚಾಮುಂಡೇಶ್ವರಿಯ ದರ್ಶನ ಪಡೆದು ಆಕೆಯ ಕೃಪೆಗೆ ಪಾತ್ರರಾಗಲು ಬೆಟ್ಟಕ್ಕೆ ಆಗಮಿಸುತ್ತಾರೆ. ಇಲ್ಲಿಗೆ ಆಗಮಿಸುವವರು ಬಹುತೇಕರು ಭಕ್ತರು. ಹೀಗಾಗಿ ಬೆಟ್ಟಕ್ಕೆ ತೆರಳಲು ಅವರಿಗೆ ಸಾಕಷ್ಟು ಅನುಕೂಲ ಕಲ್ಪಿಸಿರುವುದರಿಂದ ರೋಪ್ ವೆ ಅಗತ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಬೆಟ್ಟಕ್ಕೆ ಪ್ರವಾಸಿಗರಿಗಿಂತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಕಾಲ್ನಡಿಗೆಯಲ್ಲಿ, ವಾಹನಗಳ ಮೂಲಕ ಬೆಟ್ಟಕ್ಕೆ ತೆರಳಲು ಅನುಕೂಲ ಕಲ್ಪಿಸಲಾಗಿದೆ.
ಇದನ್ನು ಓದಿ : – ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕುರಿ ಮೇಕೆ ಮಾರಾಟಕ್ಕೆ ವಿರೋಧ – ತ್ಯಾಜ್ಯ ಕ್ಲೀನ್ ಮಾಡದಿರಲು ಬಿಬಿಎಂಪಿ ನಿರ್ಧಾರ