ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ (VANI JAIRAM) ನಿಧನರಾಗಿದ್ದಾರೆ. ಚೆನ್ನೈ (CHENNAI) ನಲ್ಲಿ ನೆಲೆಸಿದ್ದ 78 ವರ್ಷ ವಾಣಿ ಜೈರಾಮ್ ಅವರು ಐದು ದಶಕಗಳ ವೃತ್ತಿಜೀವನವನ್ನು ಹೊಂದಿದ್ದಾರೆ. ವಿವಿಧ ಭಾರತೀಯ ಭಾಷೆಗಳಲ್ಲಿ ಸುಮಾರು 10,000 ಹಾಡುಗಳನ್ನು ಹಾಡಿದ್ದಾರೆ.
Tamil Nadu | Veteran playback singer Vani Jairam found dead at her residence in Chennai, say Thousand Lights Police officials. Details awaited.
She was conferred with the Padma Bhushan award for this year.
(Pic: Vani Jairam's Facebook page) pic.twitter.com/TEMHbHw11s
— ANI (@ANI) February 4, 2023
ವೆಲ್ಲೂರಿ (VELLORE) ನವರಾದ ಅವರು ತಮಿಳು (TAMIL) , ಕನ್ನಡ ( KANNADA) , ಹಿಂದಿ, ತೆಲುಗು, ಮಲಯಾಳಂ, ಮರಾಠಿ, ಒಡಿಯಾ, ಗುಜರಾತಿ, ಹರ್ಯಾನ್ವಿ, ಅಸ್ಸಾಮಿ, ತುಳು ಮತ್ತು ಬಂಗಾಳಿ ಸೇರಿದಂತೆ ಹಲವಾರು ಭಾಷೆಗಳಲ್ಲಿ ಹಾಡಿದ್ದಾರೆ. ಸಾವಿರಾರು ಭಕ್ತಿಗೀತೆಗಳನ್ನು ಹಾಡಿದ್ದಾರೆ. ಅಲ್ಲದೆ ಪ್ರಪಂಚದಾದ್ಯಂತ ಹಲವಾರು ಸಂಗೀತ ಕಚೇರಿಗಳನ್ನು ಸಹ ನಡೆಸಿಕೊಟ್ಟಿದ್ದಾರೆ. ಹೃಷಿಕೇಶ್ ಮುಖರ್ಜಿ ನಿರ್ದೇಶಿಸಿದ 1971ರ ಹಿಂದಿ ಚಿತ್ರ ಗುಡ್ಡಿಯೊಂದಿಗೆ ವಾಣಿ ಜೈರಾಮ್ ಹಿನ್ನೆಲೆ ಗಾಯಕಿಯಾಗಿ ಪಾದಾರ್ಪಣೆ ಮಾಡಿದ್ದರು.
ವಾಣಿ ಜಯರಾಮ್ ಚೆನ್ನೈನ ನುಂಗಂಬಾಕ್ಕಂನಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು. ಅವರ ಸಾವಿಗೆ ಕಾರಣ ಇನ್ನೂ ತಿಳಿದಿಲ್ಲ. ಅವರ ಪತಿ ಜಯರಾಮ್ 2018ರಲ್ಲಿ ಸಾವನ್ನಪ್ಪಿದರು. ಕಲಿವಾಣಿಯಾಗಿ ಜನಿಸಿದ ವಾಣಿ ಜಯರಾಮ್ ಕುಟುಂಬವು ಕೂಡ ಸಂಗೀತ ಲೋಕಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದೆ.
ಇದನ್ನುಓದಿ :- ಕಾಂಗ್ರೆಸ್ ನಲ್ಲಿ ಈ ಬಾರಿ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ- ಪರಮೇಶ್ವರ್