ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸಂಸದ ರಾಹುಲ್ ಗಾಂಧಿಗೆ ಸೋಮವಾರ ಸುಮಾರು 11 ಗಂಟೆಗಳ ಸುದೀರ್ಘ ವಿಚಾರಣೆ ಬಳಿಕವೂ ಇಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಇಡಿ (ED) ನೋಟಿಸ್ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 11.10ರ ಸುಮಾರಿಗೆ ಬಿಗಿ ಭದ್ರತೆಯೊಂದಿಗೆ ರಾಹುಲ್ ಗಾಂಧಿಯವರು ವಿಚಾರಣೆಗೆ ಹಾಜರಾದರು.
ಬೆಳಿಗ್ಗೆಯಿಂದ ರಾತ್ರಿಯವರೆಗೆ ರಾಹುಲ್ ಗಾಂಧಿ ಇಡಿ ಪ್ರಶ್ನೆಗಳಿಗೆ ಉತ್ತರಿಸಿದರು. ಆದರೆ, ವಿಚಾರಣೆ ಇನ್ನೂ ಅಪೂರ್ಣವಾಗಿದ್ದು, ಇಂದು ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆಂದು ತಿಳಿದುಬಂದಿದೆ.ಇಡಿ ವಿಚಾರಣೆಯ ಮೊದಲ ದಿನವೇ ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಇಂದು ಯಾವುದೇ ರೀತಿಯ ಅಹಿತಕರ ವಾತಾವರಣ ಸೃಷ್ಟಿಯಾಗದಂತೆ ದೆಹಲಿ ಪೊಲೀಸರು ಎಲ್ಲೆಡೆ ಬಿಗಿ ಭದ್ರತೆ ನೀಡಿದ್ದಾರೆ. ದೆಹಲಿಯ ಅಕ್ಬಾರ್ ರಸ್ತೆಯಲ್ಲಿ ಬ್ಯಾರಿಕೇಡ್ ಗಳ ಹಾಕಿ, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ. ಅಲ್ಲದೆ, ಈ ಸ್ಥಳದಲ್ಲಿ ಸೆಕ್ಷನ್ 144 ಮುಂದುವರೆದಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : – ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಹೈಡ್ರಾಮ – ಸಂಸದ ವೇಣುಗೋಪಾಲ್ ಅಸ್ವಸ್ಥ