ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಗಳು ಸತತ ಎರಡೂವರೆ ಗಂಟೆ ವಿಚಾರಣೆ ಮಾಡಿದ್ದಾರೆ. ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಮತ್ತೆ ವಿಚಾರಣೆ ಮುಂದುವರೆದಿದೆ ಎನ್ನಲಾಗಿದೆ.
ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಬೆಂಬಲಿಗರೊಂದಿಗೆ ಆಗಮಿಸಿದ ರಾಹುಲ್ ಗಾಂಧಿ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಗೆ ಹೋಗಿ ವಿಚಾರಣೆಗೆ ಹಾಜರಾರದರು. ಸುಮಾರು ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಮಧ್ಯಾಹ್ನ 2:10ರ ಸುಮಾರಿಗೆ ಊಟಕ್ಕೆ ತೆರಳಲು ಅವರಿಗೆ ಅವಕಾಶ ನೀಡಲಾಗಿತ್ತು.
ಇದನ್ನೂ ಓದಿ : – ರಾಹುಲ್, ಸೋನಿಯಾ ಗಾಂಧಿ ಬೆಂಬಲಕ್ಕೆ ನಿಂತ ಕಾಂಗ್ರೆಸ್ – ಪ್ರತಿಭಟನೆ ತಡೆದ ಪೊಲೀಸರು, ಹಲವು ನಾಯಕರು ವಶಕ್ಕೆ