ದೇಶದ್ರೋಹ ಪ್ರಕರಣ – ಸಂಸದೆ ನವನೀತ್ ರಾಣಾ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ

ದೇಶದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪಕ್ಷೇತರ ಸಂಸದೆ ನವನೀತ್ ರಾಣಾ ಷರತ್ತುಬದ್ಧ ಜಾಮೀನಿನ ಮೇಲೆ ಮುಂಬೈ ಜೈಲಿನಿಂದ ಬಿಡುಗಡೆಯಾಗಿದ್ದಾರೆ.  ನವನೀತ್ ರಾಣಾ ಹಾಗೂ ಅವರ ಪತಿ, ಶಾಸಕ ರವಿ ರಾಣಾ ಅವರಿಗೆ ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Navneet Rana shifted to hospital ahead of court ruling on bail | Deccan  Herald

ಅಗತ್ಯ ದಾಖಲೆಗಳನ್ನು ಸಕಾಲದಲ್ಲಿ ಜೈಲು ಅಧಿಕಾರಿಗಳಿಗೆ ತಲುಪಿಸದ ಹಿನ್ನೆಲೆಯಲ್ಲಿ ನವನೀತ್ ರಾಣಾ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಸದಸ್ಯೆ ನವನೀತ್ ರಾಣಾ ಅವರು ದಕ್ಷಿಣ ಮುಂಬೈನ ಬೈಕುಲ್ಲಾ ಮಹಿಳಾ ಜೈಲಿನಿಂದ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಿಡುಗಡೆಯಾಗಿದ್ದಾರೆ.

Maharashtra: Amravati MP Navneet Rana, all 16 family members test COVID-19  positive | India News

ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಸಂಸದೆ ನವನೀತ್ ಅವರು ಉಪನಗರ ಬಾಂದ್ರಾದ ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ಹೇಳಿದ್ದಾರೆ.ಪತ್ನಿಯೊಂದಿಗೆ ಬಂಧನಕ್ಕೊಳಗಾಗಿದ್ದ ಪತಿ ರವಿ ರಾಣಾ ಅವರು ನೆರೆಯ ನವಿ ಮುಂಬೈನ ತಲೋಜಾ ಜೈಲಿನಲ್ಲಿದ್ದು, ಇನ್ನೂ ಬಿಡುಗಡೆಯಾಗಿಲ್ಲ. ಇದನ್ನು ಓದಿ : – ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಜೈಲು ಶಿಕ್ಷೆ !

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!