ಸರ್ಕಾರಿ ಶಾಲೆಗಳ ನಿರ್ಲಕ್ಷ್ಯದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ (siddaramaiah) ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ. ಸೇವ್ ಸ್ಕೂಲ್ ಎಂದು ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸೈಕಲ್, ಶೂ, ಸಾಕ್ಸ್ ಗಳು ಎಲ್ಲಿ…?
ಕಳೆದೆರಡು ಶೈಕ್ಷಣಿಕ ವರ್ಷಗಳಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಸೈಕಲ್, ಶೂ ಮತ್ತು ಸಾಕ್ಸ್ ಗಳನ್ನು ಸರ್ಕಾರ ನಿಲ್ಲಿಸಿದೆ. ಹಿಂದಿನ ವರ್ಷಗಳಲ್ಲಿ ಕೊರೊನಾ ಕಾರಣ ನೀಡಿದ್ದ ಸರ್ಕಾರ ಈ ವರ್ಷ 40% ಕಮಿಷನ್ ನಿಂದಾಗಿ ಖಾಲಿಯಾಗಿರುವ ಖಜಾನೆ ತೋರಿಸುತ್ತಿದೆ.
ಒಂದೆಡೆ ಸಚಿವರು, ಆಡಳಿತ ಪಕ್ಷದ ನಾಯಕರು ಮತ್ತು ಅಧಿಕಾರಿಗಳ ದುಷ್ಟಕೂಟ ಕಮಿಷನ್ ದಂಧೆಯಲ್ಲಿ ತೊಡಗಿ ಖಜಾನೆಯನ್ನು ಲೂಟಿ ಮಾಡುತ್ತಿದ್ದರೆ, ಇನ್ನೊಂದೆಡೆ ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ, ಸೈಕಲ್, ಶೂ, ಸಾಕ್ಸ್ ನೀಡದೆ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.
ಇಂದಿನ ದಿನದವರೆಗೆ ಶಾಲಾ ಮಕ್ಕಳಿಗೆ ನೀಡಬೇಕಾಗಿದ್ದ ಪಠ್ಯಪುಸ್ತಕಗಳ ಬಗ್ಗೆ ಖಚಿತ ತೀರ್ಮಾನ ಕೈಗೊಳ್ಳಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕೆಲವು ಶಾಲೆಗಳಿಗೆ ಹಳೆಯ ಪಠ್ಯ, ಇನ್ನು ಕೆಲವು ಶಾಲೆಗಳಿಗೆ ಹೊಸ ಪಠ್ಯ, ಉಳಿದ ಶಾಲೆಗಳಿಗೆ ಪಠ್ಯವೇ ಇಲ್ಲದಂತಹ ದುಸ್ಥಿತಿ ಇದೆ. ಇಷ್ಟೊಂದು ಗತಿಗೇಡಿನ ಸರ್ಕಾರ ಇರಲಿಲ್ಲ…. ಇದನ್ನೂ ಓದಿ : – ಮುಸ್ಲಿಂ ಸಮುದಾಯಕ್ಕೆ ಉಪರಾಷ್ಟ್ರಪತಿ ಪಟ್ಟ? ರೇಸ್ ನಲ್ಲಿ ನಖ್ವಿ, ಆರಿಫ್ ಮೊಹಮ್ಮದ್ ಖಾನ್, ನಜ್ಮಾ ಹೆಪ್ತುಲ್ಲಾ !
ಕೊರೊನಾ ಕಾಲದ ಕಲಿಕಾ ಅಂತರವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ “ವಿದ್ಯಾಪ್ರವೇಶ” ಮತ್ತು “ಕಲಿಕಾ ಚೇತರಿಕೆ” ಎಂಬ ಎರಡು ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಇದಕ್ಕೆ ಸಂಬಂಧಿಸಿದ ಕಲಿಕಾ ಹಾಳೆಗಳನ್ನು ಕೂಡಾ ಪೂರೈಸಲು ಬಿಜೆಪಿ (bjp) ಸರ್ಕಾರದಲ್ಲಿ ದುಡ್ಡಿಲ್ಲ. ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿರುವ ಕಲಿಕಾ ಹಾಳೆಗಳನ್ನು ಶಿಕ್ಷಕರು ಸ್ವಂತ ಖರ್ಚಿನಿಂದ ಡೌನ್ ಲೋಡ್ ಮಾಡಿಕೊಂಡು, ಜೆರಾಕ್ಸ್ ಪ್ರತಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇಷ್ಟೊಂದು ಗತಿಗೇಡಿನ ಸರ್ಕಾರ ಹಿಂದೆ ಇರಲಿಲ್ಲ, ಮಂದೆ ಬರಲಾರದು ಎಂದು ವ್ಯಂಗ್ಯವಾಡಿದ್ದಾರೆ.
ವಿದ್ಯಾರ್ಥಿನಿಯರಿಗೆ ಸೈಕಲ್ ಎಲ್ಲಿ..?
ವಿದ್ಯಾರ್ಥಿನಿಯರಿಗೆ ಸೈಕಲ್ ಗಳನ್ನು ನೀಡುವ ಯೋಜನೆ ಹಿಂದಿನ ಸಿಎಂ ಬಿಎಸ್ವೈ ಅವರದ್ದು, ಆ ಯೋಜನೆಯನ್ನು ಕೂಡಾ ಸ್ಥಗಿತಗೊಳಿಸುವ ಮೂಲಕ ಸಿಎಂ ಬೊಮ್ಮಾಯಿ (basavaraj bommai) ಯಡಿಯೂರಪ್ಪನವರ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊರಟಿದ್ದಾರೆಯೇ? ಶಾಲಾ ಬಡ ಮಕ್ಕಳಿಗಾಗಿ ನಮ್ಮ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಒಂದೊಂದಾಗಿ ಸ್ಥಗಿತಗೊಳಿಸಲು ಸರ್ಕಾರ ಹೊರಟಿದೆ. ವಿದ್ಯಾಸಿರಿ ಯೋಜನೆಗೆ ಹಣ ನೀಡುತ್ತಿಲ್ಲ
ಕ್ಷೀರಭಾಗ್ಯ ಮತ್ತು ಮಧ್ಯಾಹ್ನದ ಬಿಸಿಊಟಕ್ಕೂ ಕಲ್ಲು ಹಾಕುತ್ತಿದೆ ಎಂದು ಆಕ್ಷೇಪವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : – ಬ್ರಿಟನ್ ಹಣಕಾಸು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಾಕ್