ಬೆಂಗಳೂರು : ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ (New Zealand V/S Pakistan) ಸೆಮಿಫೈನಲ್ ಭರ್ಜರಿ ಫೈಪೋಟಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಇಂದು ಸಾಕ್ಷಿಯಾಗಲಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ನಡುವೆ ಪಂದ್ಯ ನಡೆಯುವ ಹಿನ್ನೆಲೆ ವೀಕ್ಷಣೆಗೆ ಬರುವ ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗಲಿದ್ದು, ಸ್ಟೇಡಿಯಂ ಸುತ್ತಮುತ್ತಲಿನ ಕ್ವೀನ್ಸ್ ರಸ್ತೆ, ಎಂ.ಜಿ.ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ಕಬ್ಬನ್ ರಸ್ತೆ, ನೃಪತುಂಗರಸ್ತೆ ಸೇರಿ ಹಲವು ಕಡೆ ವಾಹನಗಳ ನಿಲುಗಡೆಗೆ ನಿರ್ಬಂಧ ಹೇರಲಾಗಿದೆ.

ನ್ಯೂಜಿಲೆಂಡ್ ಹಾಗೂ ಪಾಕ್ ಪಂದ್ಯಕ್ರಿಕೆಟ್ ಅಭಿಮಾನಿಗಳ ವಾಹನ ನಿಲುಗಡೆಗೆ ಕಿಂಗ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಶಿವಾಜಿನಗರ, BMTC ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.