ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಶುರವಾಗಲಿದೆ. ಮಕ್ಕಳು ಮುಕ್ತವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಿ. ಮಕ್ಕಳ ಭವಿಷ್ಯ ದೃಷ್ಟಿಯಿಂದ ಅವರನ್ನ ವಿಶ್ವಾಸಕ್ಕೆ ಪಡೆಯಬೇಕು. ಶಾಲಾ ಮಕ್ಕಳಲ್ಲಿ ವಿಷಬೀಜ ಬಿತ್ತಲಾಗುತ್ತಿದೆ ಎಂದು ಕೋಲಾರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮುಸ್ಲಿಮರು ವ್ಯಾಪಾರ ಮಾಡುವುದಕ್ಕೆ ನಿರ್ಬಂಧ ವಿಚಾರ
ಮುಸ್ಲಿಮರು ವ್ಯಾಪಾರ ಮಾಡುವುದಕ್ಕೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿ ದೇಶವನ್ನು ಎಲ್ಲಿಗೆ ಕೊಂಡೊಯ್ಯುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ. ರಾಜ್ಯಕ್ಕೆ ಈ ರೀತಿಯ ಪರಿಸ್ಥಿತಿ ಬರುತ್ತೆಂದು ಊಹಿಸಿರಲಿಲ್ಲ. ರಾಷ್ಟ್ರೀಯ ಪಕ್ಷಗಳು ಸಮಾಜದ ಸಾಮರಸ್ಯ ಹಾಳುಮಾಡುತ್ತಿವೆ. ಕೋಲಾರದಲ್ಲೂ ಕೋಮು ಸಂಘರ್ಷಕ್ಕೆ ಪ್ರಯತ್ನ ಮಾಡ್ತಿದ್ದಾರೆ. ಕೋಲಾರದ ಶಾಂತಿಭಂಗಕ್ಕೆ ಬಿಜೆಪಿ ನಾಯಕರು ಮುಂದಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ :- ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಂಗಳೂರಿನಿಂದ ಕೋಲಾರದ ವರೆಗೂ ಸೈಕಲ್ ಜಾಥಾ
ಸಿದ್ದರಾಮಯ್ಯ ಬಗ್ಗೆ ಮಾತಾಡುವ ಅಗತ್ಯವಿಲ್ಲ
ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡುವ ಅಗತ್ಯವಿಲ್ಲ. ರಾಜ್ಯದ ಇಂದಿನ ಸ್ಥಿತಿಗೆ ಸಿದ್ದರಾಮಯ್ಯ ಅವರೇ ಕಾರಣ. ಸಿದ್ದರಾಮಯ್ಯರನ್ನು ನಂಬಿ ಮುಸ್ಲಿಮರು ಬೀದಿಗೆ ಬಂದಿದ್ದಾರೆ.
ಮುಸ್ಲಿಮರಲ್ಲೂ ಈಗ ಮರುಚಿಂತನೆ ಆರಂಭವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದಾರೆ.
ಇದನ್ನು ಓದಿ :- ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸರ್ಕಾರ ಸಕಲ ತಯಾರಿ ಮಾಡಿಕೊಂಡಿದೆ – ಸಿಎಂ ಬೊಮ್ಮಾಯಿ