ಪಾಕಿಸ್ತಾನದ ಮಾಜಿ ಪ್ರಧಾನಿ ಪರ್ವೇಜ್ ಮುಷರಫ್ (Pervez Musharraf) ಸ್ಥಿತಿ ಗಂಭೀರವಾಗಿದೆ. ದುಬೈನ ಆಸ್ಪತ್ರೆಗೆ ದಾಖಲಾಗಿದ್ದು ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಕ್ಷಿಪ್ರ ಸೇನಾ ಕ್ರಾಂತಿಯಲ್ಲಿ ಪಾಕಿಸ್ತಾನ (PAKISTAN)ದ ಅಧಿಕಾರ ಕೈವಶ ಮಾಡಿಕೊಂಡಿದ್ದ ಪರ್ವೇಜ್ ಮುಷರಫ್ ನಂತರದ ದಿನಗಳಲ್ಲಿ ನಡೆದ ಹಲವು ರಾಜಕೀಯ ಬೆಳವಣಿಗೆಗಳಿಂದಾಗಿ ದೇಶದಿಂದ ದೂರವೇ ಉಳಿಯಬೇಕಾಯಿತು.
ಭಾರತದ ಜೊತೆಗೆ ಪಾಕಿಸ್ತಾನವು ಶಾಂತಿ ಸ್ಥಾಪನೆಗೆ ಯತ್ನಿಸುತ್ತಿದ್ದಾಗ ಲೇಹ್-ಕಾರ್ಗಿಲ್ ಹೆದ್ದಾರಿ ಸಮೀಪ ಪಾಕಿಸ್ತಾನದ ಸೇನೆಯನ್ನು ಗಡಿ ನಿಯಂತ್ರಣ ರೇಖೆ ದಾಟಿಸಿ, ಯುದ್ಧಕ್ಕೂ ಕಾರಣರಾಗಿದ್ದರು. ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ (ನಿವೃತ್ತ) ಪರ್ವೇಜ್ ಮುಷರಫ್ ಅವರನ್ನು ದುಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು.. ವೈದ್ಯಕೀಯ ವರದಿಗಳ ಪ್ರಕಾರ, ಮುಷರಫ್ ಹೃದಯ ಮತ್ತು ರಕ್ತದೊತ್ತಡದ ಸಮಸ್ಯೆ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಪಾಕಿಸ್ತಾನದ ಮಿಲಿಟರಿ ಜನರಲ್ ಆಗಿದ್ದ ಪರ್ವೇಜ್ ಮುಷರಫ್ ಬಲವಂತದಿಂದ ಪ್ರಧಾನಿ ಕೈಯಿಂದ ಅಧಿಕಾರ ಕಿತ್ತುಕೊಂಡವರು. ಪಾಕಿಸ್ತಾನದ ಇತಿಹಾಸದಲ್ಲಿ ಮೊದಲ ಬಾರಿಗೆ ಮಿಲಿಟರಿ ಆಡಳಿತವನ್ನು ತಂದವರು. ಅದಾದ ನಂತರ ಅಧ್ಯಕ್ಷರಾಗಿ ಆಯ್ಕೆಯಾದರು. ಅವರ ಮೇಲೂ ಸಾಕಷ್ಟು ಭ್ರಷ್ಟಾಚಾರದ ಆರೋಪಗಳಿವೆ. ಅಧಿಕಾರ ಕಳೆದುಕೊಂಡ ನಂತರ ಪಾಕಿಸ್ತಾನ ತೊರೆದು ದುಬೈನಲ್ಲಿ ನೆಲೆಸಿದ್ದರು. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆ ಅವರು ದುಬೈನಲ್ಲಿ ಆಸ್ಪತ್ರೆ ಸೇರಿದ್ದರು.
ಇದನ್ನೂ ಓದಿ : – ಪ್ರವಾದಿ ವಿರುದ್ಧ ವಿವಾದಾತ್ಮಕ ಹೇಳಿಕೆ – ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ದೇಶಾದ್ಯಂತ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ – ಹಲವೆಡೆ ಹಿಂಸಾಚಾರ