ಬೆಂಗಳೂರಿನಲ್ಲಿ 110 ರೂಪಾಯಿ ದಾಟಿತು ಪೆಟ್ರೋಲ್, ಡೀಸೆಲ್ ದರ

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿದ್ದು, ಇಂಧನ ದರದಲ್ಲಿ ಮತ್ತೆ ಹೆಚ್ಚಳವಾಗಿದೆ. ಮಾರ್ಚ್ 22 ರಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಎನ್ನುವಂತೆ ಏರುತ್ತಲೇ ಇದೆ.

Petrol and diesel prices today in Hyderabad, Delhi, Chennai, Mumbai hikes -  15 October 2021

ಅದರ ಪರಿಣಾಮ ಕಳೆದ ಎರಡು ವಾರಗಳಲ್ಲಿ ಪೆಟ್ರೋಲ್ ಬೆಲೆ ಬೆಂಗಳೂರಿನಲ್ಲಿ ಪ್ರತಿ ಲೀಟರ್ಗೆ ಸರಾಸರಿ ₹ 9.59ರಷ್ಟು ಹೆಚ್ಚಾಗಿದೆ. ಮೊದಲ 4 ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಯಿತು. ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 80 ಪೈಸೆ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ಗೆ 84 ಪೈಸೆ ಹೆಚ್ಚಾಗಿದ್ದು, ₹ 110.25ಕ್ಕೆ ಮಾರಾಟವಾಗುತ್ತಿದೆ. ಡೀಸೆಲ್ ದರ ಲೀಟರ್ಗೆ 78 ಪೈಸೆ ಹೆಚ್ಚಾಗಿದ್ದು ₹ 94.01ಕ್ಕೆ ಮಾರಾಟವಾಗುತ್ತಿದೆ.

ಇದನ್ನು ಓದಿ : – ಮತ್ತೆ 110 ರೂ.ಗಳತ್ತ ಪೆಟ್ರೋಲ್, ಡೀಸೆಲ್ ದರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!