ರಾಮ ದೇವರ ಬೆಟ್ಟದಲ್ಲಿ ದಕ್ಷಿಣ ಅಯೋಧ್ಯೆ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗಿದೆ. ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಲು ಸಿಎಂ ಸೂಚನೆ ನೀಡಿದ್ದಾರೆ ಎಂದು ಸಚಿವ ಅಶ್ವತ್ಥ್ ನಾರಾಯಣ್ (Ashwath Narayan) ಹೇಳಿದ್ರು.
ಸುವರ್ಣಸೌಧದಲ್ಲಿ ಮಾತನಾಡಿದ (Ramanagar) ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್, ನಮ್ಮ ರಾಮನಗರ, ರಾಮನಗರ ಎಂದು ಪ್ರೇರಣೆ ಇದೆ. ರಾಮನ ಅಭಿವೃದ್ಧಿ ಇಲ್ಲಿಯೂ ಮಾಡಬೇಕು. ಉತ್ತರ ಭಾರತದಂತೆ ದಕ್ಷಿಣ ಭಾರತದಲ್ಲೂ ರಾಮ ಮಂದಿರ (RamaMandir) ನಿರ್ಮಾಣ ಆಗುತ್ತೆ ಎಂಬ ವಿಶ್ವಾಸ ಇದೆ. ಬರುವಂತಹ ಬಜೆಟ್ ನಲ್ಲಿ ಸಿಎಂ ಬಜೆಟ್ (Budget) ಘೋಷಣೆ ಮಾಡಬಹುದು ಎಂದು ತಿಳಿಸಿದ್ರು.
ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಆಹ್ವಾನಿಸಿದ್ದೇವೆ. ಇದನ್ನು ಓದಿ : – BREAKING ಪ್ರಧಾನಿ ಮೋದಿ ತಾಯಿ ಹೀರಾಬೆನ್ ಅಸ್ವಸ್ಥ – ಆಸ್ಪತ್ರೆಗೆ ದಾಖಲು
ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ಕೊಡ್ತಿದ್ದಾರೆ. ಅಮಿತ್ ಶಾ ಭೇಟಿಯಿಂದ ರಾಜ್ಯದಲ್ಲಿ ದೊಡ್ಡ ಸಂಚಲನ ಉಂಟಾಗಲಿದೆ. ಇದರಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬರಲಿದೆ. ಹಳೆ ಮೈಸೂರು ಭಾಗದಲ್ಲಿ ಸಂಖ್ಯೆ ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆ. ಮೈಶುಗರ್ ಕಾರ್ಖಾನೆಯನ್ನೇ ಸರಿಯಾಗಿ ನಿರ್ವಹಣೆ ಮಾಡುವುದಕ್ಕೆ ಜೆಡಿಎಸ್ ಕಾಂಗ್ರೆಸ್ ಗೆ ಆಗಲಿಲ್ಲ. ಹಳೆ ಮೈಸೂರು ಭಾಗದ ಜನ ಜೆಡಿಎಸ್ (JDS), ಕಾಂಗ್ರೆಸ್ (Congress) ಅನ್ನು ಬಹಳ ನಂಬಿದ್ದರು. ಅವರನ್ನು ನಂಬಿ ಏನೂ ಆಗಿಲ್ಲ. ಪಾಂಡವಪುರ ಮೈಶುಗರ್ ಸೇರಿದಂತೆ ಎಲ್ಲ ಅಭಿವೃದ್ಧಿ ಕೂಡ ಬಿಜೆಪಿಯಿಂದಲೇ ಆಗಿದೆ. ಎಲ್ಲ ವರ್ಗದ ಜನರನ್ನು ಪ್ರತಿನಿಧಿಸಿ ಸರ್ವಾಂಗೀಣ ಅಭಿವೃದ್ಧಿ ಗೆ ನಾವು ಕೆಲಸ ಮಾಡ್ತೇವೆ ಎಂದು ಸಮರ್ಥಿಸಿಕೊಂಡ್ರು.
ಇದನ್ನು ಓದಿ : – ರೌಡಿ ಶೀಟ್ ತೆರೆಯುವ ಬಗ್ಗೆ ಹೈಕೋರ್ಟ್ ನಿಂದ ಮಾರ್ಗಸೂಚಿ ರಿಲೀಸ್