NDA ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು (Draupadi murmu) ಇಂದು ಪ್ರಧಾನಿ ನರೇಂದ್ರ ಮೋದಿ (Narendra modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Amith shah) ಅವರನ್ನು ಭೇಟಿ ಮಾಡಿದ್ದಾರೆ.
ಈ ವೇಳೆ ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ಅವರ ಉಮೇದುವಾರಿಕೆಯ ಬಗ್ಗೆ ದೇಶಾದ್ಯಂತ ಸಮಾಜದ ಎಲ್ಲಾ ವರ್ಗಗಳಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮುರ್ಮು ನಾಳೆ ತಮ್ಮ ನಾಮಪತ್ರವನ್ನು ಸಲ್ಲಿಸುವ ನಿರೀಕ್ಷೆ ಇದೆ. ಅವರಿಗೆ ಮೋದಿ ಮೊದಲ ಸೂಚಕರಾಗಿ ಸಹಿ ಮಾಡುವ ಸಾಧ್ಯತೆ ಇದೆ.
ಈ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ” ಇಂದು ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದೆ. ಅವರ ಉಮೇದುವಾರಿಕೆಯ ಬಗ್ಗೆ ಭಾರತದಾದ್ಯಂತ ಸಮಾಜದ ಎಲ್ಲಾ ವರ್ಗಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಎಂದು ಹೇಳಿದ್ದಾರೆ. ಇದನ್ನೂ ಓದಿ : – ನೀವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಿ- ನಾವು ಹೊಸ ಪಕ್ಷ ಕಟ್ಟುತ್ತೇವೆ – ಬಂಡಾಯ ಶಾಸಕರಿಗೆ ರಾವತ್ ನೇರ ಸಂದೇಶ