ಆಸ್ತಿ ವಿವರ ಘೋಷಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ( narendra modi ) ಅವರು ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ. ಮೋದಿ ಅವರ ಚರಾಸ್ತಿಯು ಒಂದು ವರ್ಷದಲ್ಲಿ 26.13 ಲಕ್ಷದಷ್ಟು ಏರಿಕೆಯಾಗಿದ್ದು, ಅವರ ಬಳಿ ಒಟ್ಟು 2.23 ಕೋಟಿ ಮೌಲ್ಯದ ಆಸ್ತಿ ಇದೆ. ಕಳೆದ ವರ್ಷ ಪ್ರಧಾನಿ ಮೋದಿ ಬಳಿಯಿದ್ದ ನಗದು ಮೊತ್ತ 36,900 ರೂ.ನಿಂದ 35,250 ರೂ.ಗೆ ಇಳಿದಿತ್ತು. 2021ರ ಮಾರ್ಚ್ 31, 2021 ರವರೆಗೆ ಅವರ ಬ್ಯಾಂಕ್ ಖಾತೆಯಲ್ಲಿ 1,52,480 ರೂ. ಇದ್ದ ಹಣ 46,555 ರೂ.ಗೆ ಕಡಿಮೆಯಾಗಿದೆ.


ಗುಜರಾತ್ನ ಗಾಂಧಿನಗರದಲ್ಲಿರುವ ಭೂಮಿಯನ್ನು ದಾನ ಮಾಡಿರುವುದರಿಂದ ಅವರ ಬಳಿ ಯಾವುದೇ ಸ್ಥಿರಾಸ್ತಿ ಇಲ್ಲ. 2022ರ ಮಾರ್ಚ್ 31ರ ವೇಳೆಗೆ ಮೋದಿ ಅವರ ಒಟ್ಟು ಆಸ್ತಿ ಮೌಲ್ಯ 2,23,82,504 ರೂ. ಆಗಿದೆ.
ಮೋದಿ ಅವರು ಯಾವುದೇ ಬಾಂಡ್, ಷೇರು ಅಥವಾ ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ ಮಾಡಿಲ್ಲ. ವಾಹನ ಕೂಡ ಹೊಂದಿಲ್ಲ. 1.73 ಲಕ್ಷ ರೂ. ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ ಎಂದು ಆಸ್ತಿ ವಿವರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ : –  ಬಿಹಾರದಲ್ಲಿ ಮಹಾಘಟಬಂಧನ್ 2.0- ನೂತನ ಸರ್ಕಾರದಲ್ಲಿ ತೇಜಸ್ವಿ ಯಾದವ್ ಡಿಸಿಎಂ?

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!