ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ – IISC ಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟನೆ

2 ದಿನಗಳ ಕರ್ನಾಟಕ ಪ್ರವಾಸದಲ್ಲಿ ಸೋಮವಾರ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಸುಮಾರು 15 ಸಾವಿರ ಕೋಟಿ ರೂಪಾಯಿಗಳ ಬೆಂಗಳೂರು ಉಪ ನಗರ ರೈಲು ಯೋಜನೆ ಸೇರಿದಂತೆ 33 ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಹಲವು ಮಹತ್ವದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ. ನಾಳೆ ಬೆಳಗ್ಗೆ 6.30ಕ್ಕೆ ಮೈಸೂರು ಅರಮನೆ ಮುಂಭಾಗ ಅಂತಾರಾಷ್ಟ್ರೀಯ ಯೋಗ ದಿನ(International yoga day) ಕಾರ್ಯಕ್ರಮದಲ್ಲಿ ಪ್ರಧಾನಿಯವರು ಭಾಗಿಯಾಗಲಿದ್ದು ಈ ಸಂದರ್ಭದಲ್ಲಿ 15 ಸಾವಿರಕ್ಕೂ ಅಧಿಕ ಮಂದಿ ಜೊತೆಯಾಗಲಿದ್ದಾರೆ.


ಇಂದು ಮಧ್ಯಾಹ್ನ 12 ಗಂಟೆ 5 ನಿಮಿಷಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದ ಮೋದಿಯವರನ್ನು ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ರಕ್ಷಣಾ ಇಲಾಖೆಯ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು. ನಂತರ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಕ್ಯಾಂಪಸ್ಗೆ ರಸ್ತೆಮಾರ್ಗ ಮೂಲಕ ಆಗಮಿಸಿದ ಮೋದಿ ಸೆಂಟರ್ ಫಾರ್ ಬ್ರೈನ್ ರಿಸರ್ಚ್ (CBR) ಮೆದುಳು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿದರು ಇದಕ್ಕಾಗಿ ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಶ್ ಗೋಪಾಲಕೃಷ್ಣ ಅವರು 450 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ ನಂತರ ಪ್ರಧಾನಿಯವರು ಬಾಗ್ಚಿ-ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಅಡಿಪಾಯ ಹಾಕಿದರು.
ಕೆಂಗೇರಿ ಬಳಿಯ ಕೊಮ್ಮಘಟ್ಟಕ್ಕೆ ತೆರಳಿರುವ ಮೋದಿ ಅಲ್ಲಿ 50,000ಕ್ಕೂ ಅಧಿಕ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಡಾ. ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಬೇಸ್ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ನ್ನು ಉದ್ಘಾಟಿಸಿದರು. ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಇದನ್ನು ಓದಿ :- ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ – ಯಲಹಂಕ ವಾಯುನೆಲೆಯಲ್ಲಿ ಸಿಎಂ ಬೊಮ್ಮಾಯಿ ಸ್ವಾಗತ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!