ರಾಜ್ಯ ಸಭೆ ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಮತ ಹಾಕಿರುವುದಾಗಿ ಹೇಳಿಕೆ ನೀಡಿರುವ ಹಿನ್ನೆಲೆ ಕೋಲಾರ ನಗರದ ಮಹಾಲಕ್ಷ್ಮಿ ಲೇಜೌಟ್ ನಲ್ಲಿರುವ ಶ್ರೀನಿವಾಸ್ ಗೌಡ ಮನೆ ಮುಂದೆ ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದ್ರು.
ಶಾಸಕರ ನಿವಾಸಕ್ಕೆ ಜೆಡಿಎಸ್ ಮುಖಂಡ ಸಿಎಂಅರ್ ಶ್ರೀನಾಥ್ ನೇತೃತ್ವದಲ್ಲಿ ಮುತ್ತಿಗೆ ಹಾಕಲಾಗಿದೆ. ಜೆಡಿಎಸ್ ಪಕ್ಷದಿಂದ ಗೆದ್ದು ಕಾಂಗ್ರೆಸ್ ಗೆ ಮತ ನೀಡಿರುವುದಕ್ಕೆ ಶ್ರೀನಿವಾಸಗೌಡ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಎಂಎಲ್ಸಿ ಗೋವಿಂದರಾಜು ಸಹ ಬಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.
ಇದನ್ನೂ ಓದಿ : – ಶ್ರೀನಿವಾಸ್ ಗೌಡಗೆ ಮಾನ ಮರ್ಯಾದೆ ಇದ್ಯಾ ? – ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ