ರಾಜಧಾನಿ ಬೆಂಗಳೂರಿ (Bangalore) ನಲ್ಲಿ ಅಂಗನವಾಡಿ ಕಾರ್ಯಕರ್ತೆ (Anganwadi worker) ಯರ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಇದುವರೆಗೂ ಯಾವುದೇ ಅಧಿಕಾರಿಗಳು ಮನವೊಲಿಸಲು ಕೂಡ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಬೇಡಿಕೆಯನ್ನು ಈಡೇರಿಸದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶವ್ಯಕ್ತಪಡಿಸಿದ್ದಾರೆ.
ಬೇಡಿಕೆ ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರ ವಿರುದ್ದ ಅಂಗನವಾಡಿ ಕಾರ್ಯಕರ್ತೆಯರು ರೊಚ್ಚಿಗೆದ್ದಿದ್ದಾರೆ. ನಿನ್ನೆಯಿಂದ ಅಹೋರಾತ್ರಿ ಪ್ರತಿಭಟನೆ ಮುಂದುವರಿಸಿರುವ ಅಂಗನವಾಡಿ ಕಾರ್ಯಕರ್ತಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಳಿಕೊಳ್ಳುತ್ತಿದ್ದಾರೆ. ರಾತ್ರಿ ಫ್ರೀಡಂ ಪಾರ್ಕ್ನಲ್ಲಿ ಮಲಗಿದ್ದ ಅಂಗನವಾಡಿ ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸಿದ್ದಾರೆ. NEP ಯನ್ನು ಅಂಗನವಾಡಿಗಳಿಗೂ ಜಾರಿಗೆ ತರುವಂತೆ ಇವರ ಬೇಡಿಕೆ (Demand) ಆಗಿದೆ. ಕನಿಷ್ಠ ವೇತನ, ಗ್ರ್ಯಾಚೂಟಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.
ಚಳಿಯನ್ನು ಕೂಡಾ ಲೆಕ್ಕಿಸದೆ ರಾತ್ರಿ ಇಡೀ ಪ್ರತಿಭಟನೆ ನಡೆಸಿರುವ ಕಾರ್ಯಕರ್ತೆಯರು ತಮ್ಮ ಬೇಡಿಕೆ ಈಡೇರುವವರೆಗೂ ಧರಣಿ ನಡೆಸುವುದು ಖಾತ್ರಿಯಾಗಿದೆ. ಸಚಿವರು ಬಂದು ಸಮಸ್ಯೆ ಬಗೆಹರಿಸುವ ತನಕ ಸ್ಥಳ ಬಿಟ್ಟು ಹೋಗುವುದಿಲ್ಲವೆಂದು ಪಟ್ಟು ಹಿಡಿದು ಕೂತಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಇಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಇದನ್ನು ಓದಿ :- ನೋ ಪಾರ್ಕಿಂಗ್ ಸ್ಥಳದಲ್ಲಿದ್ದ ಮೂಡಿಗೆರೆ ಶಾಸಕರ ಕಾರು ಲಾಕ್ ಮಾಡಿದ ಪೊಲೀಸರು
ಕಾರ್ಯಕರ್ತೆಯರ ಬೇಡಿಕೆಗಳೇನು..?
– ಕನಿಷ್ಠ ವೇತನ ಜಾರಿಗೊಳಿಸಬೇಕು
– ನೌಕರಿ ಖಾಯಂಗೊಳಿಸಬೇಕು
– ಗ್ರ್ಯಾಚುಟಿ ಬಿಡುಗಡೆ ಮಾಡಬೇಕು
– NEP ಯಲ್ಲಿ ಕೆಲ ಬದಲಾವಣೆ ಮಾಡಬೇಕು
ಅಂಗನವಾಡಿ ಕಾರ್ಯಕರ್ತೆಯರು ಮುಖ್ಯವಾಗಿ ಈ ನಾಲ್ಕು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.
ಇದನ್ನು ಓದಿ :- ಸಿದ್ದರಾಮಯ್ಯ ವಿರುದ್ಧ ಸ್ಫರ್ಧಿಸುವ ಭರದಲ್ಲಿ ಯಡವಟ್ಟು ಮಾಡಿಕೊಂಡ್ರಾ ವರ್ತೂರು ಪ್ರಕಾಶ್ ?