ರಾಜ್ಯ ಸರ್ಕಾರ 6 ವರ್ಷ ಕಳೆದರೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಹಿನ್ನೆಲೆ ಸರ್ಕಾರದ ವಿರುದ್ಧ ನೌಕರರು ಮತ್ತೆ ಪ್ರತಿಭಟನೆಗೆ ಇಳಿಯಲಿದ್ದಾರೆ. ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಇಂದಿನಿಂದ ಜಂಟಿ ಕ್ರಿಯಾ ಸಮಿತಿ ಬೆಂಗಳೂರಿನ 4 ನಿಗಮದ ವಿಭಾಗೀಯ ಕಚೇರಿ ಮುಂದೆ ಬೃಹತ್ ಧರಣಿ ಸತ್ಯಾಗ್ರಹ ನಡೆಸಲು ಕರೆ ನೀಡಿದೆ.
ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ಧರಣಿ ನಡೆಯಲಿದೆ. ಇನ್ನು BMTC ನೌಕರರು ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಸಾರಿಗೆ ನೌಕರರ ಪ್ರತಿಭಟನೆಯಿಂದ KSRTC ಮತ್ತು BMTC ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲವೆಂದು KSRTC ಮತ್ತು BMTC ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಇದನ್ನು ಓದಿ :- ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ…!
ಪ್ರಯಾಣಿಕರಿಗೆ ನಿಯಮಿತ, ವ್ಯವಸ್ಥಿತ ಸಾರಿಗೆ ಸೌಲಭ್ಯ ಒದಗಿಸುವ ಉದ್ದೇಶವಿದೆ. ಹೀಗಾಗಿ ಸಾರಿಗೆ ವಾಹನ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಸಾರಿಗೆ ಮಂಡಳಿ ಕಾರ್ಯದರ್ಶಿ, ಸಾರ್ವಜನಿಕ ಸಂಪರ್ಕಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.
ಇದನ್ನು ಓದಿ :- ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಯುವ ಇಚ್ಛೆ ವ್ಯಕ್ತಪಡಿಸಿದ ಭಗತ್ ಸಿಂಗ್ ಕೋಶ್ಯಾರಿ!