545 ಪಿಎಸ್ಐ (Psi) ನೇಮಕಾತಿ ಹಗರಣದಲ್ಲಿ ಸಿಲುಕಿ ಕಳೆದ ಎರಡು ತಿಂಗಳಿಂದ ತಲೆ ಮರೆಸಿಕೊಂಡಿದ್ದ ಪಿಎಸ್ಐ ಅಕ್ರಮ ಪ್ರಕರಣದ ಆರೋಪಿಗಳಾದ ಶಾಂತಿ ಬಾಯಿ (Shantha bai) ಹಾಗೂ ಆಕೆಯ ಪತಿ ಬಸಯ್ಯ ನಾಯಕನನ್ನು(Basayya nayak) ಕೊನೆಗೂ ಸಿಐಡಿ ಪೊಲೀಸರು(Cid police) ತೆಲಂಗಾಣದಲ್ಲಿ (Telangana police) ಬಂಧಿಸಿದ್ದಾರೆ.
ಅಕ್ಟೋಬರ್ 30, 2021(October 30) ರಂದು ನಡೆದ ಪಿಎಸ್ಐ ಲಿಖಿತ ಪರೀಕ್ಷೆಯ ನಂತರ, ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿತ್ತು. ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ (Araga gnanendra) ಪ್ರಕರಣದ ತನಿಖೆಗೆ ಆದೇಶಿಸಿದ್ದ. ಬಳಿಕ ಪ್ರಕರಣವನ್ನು ಕೈಗೆತ್ತಿಕೊಂಡ ಸಿಐಡಿ ಪೊಲೀಸರು, ಅಕ್ರಮದಲ್ಲಿ ಭಾಗಿಯಾದ 32ಕ್ಕೂ ಅಧಿಕ ಆರೋಪಿಗಳನ್ನು ಈವರೆಗೆ ಬಂಧಿಸಿ ವಿಚಾರಣೆ ನಡೆಸಿ ಜೈಲಿಗಟ್ಟಿದ್ದಾರೆ.ಆರೋಪಿ ಶಾಂತಿ ಬಾಯಿ ಲಂಚ ಕೊಟ್ಟು ಪರೀಕ್ಷೆ ಬರೆದು ಪಾಸಾಗಿದ್ದ ಅಭ್ಯರ್ಥಿ. ಈಕೆಯ ಅಕ್ರಮಕ್ಕೆ ಪತಿ ಬಸಯ್ಯ ಸಹಕರಿಸಿದ್ದ. ತೆಲಂಗಾಣದ ಹೈದ್ರಾಬಾದ್ ನಲ್ಲಿ (Telangana -Hyderabad) ದಂಪತಿ ಬಂಧಿಸಿದ ಪೊಲೀಸರು, ಇದೀಗ ವಿಚಾರಣೆಗೆ ಒಳಪಡಿಸಿದ್ದಾರೆ.ಅಭ್ಯರ್ಥಿ ಶಾಂತಿ ಬಾಯಿ ಪ್ರಕರಣದ ಕಿಂಗ್ ಪಿನ್ ಗಳಾದ ಮಂಜುನಾಥ ಮೇಳಕುಂದಿಗೆ ಹಣ ನೀಡಿ ಪರೀಕ್ಷೆ ಬರೆದಿದ್ದಳು ಎನ್ನಲಾಗಿದೆ. ಹೀಗಾಗಿ, ಪ್ರಕರಣ ಹೊರ ಬೀಳುತ್ತಿದ್ದಂತೆಯೇ ಹೈದ್ರಾಬಾದ್ ನಲ್ಲಿ ತಲೆ ಮರೆಸಿಕೊಂಡಿದ್ದರು. ಇದನ್ನೂ ಓದಿ : – ಸಿದ್ದರಾಮಯ್ಯ ವಿರುದ್ಧ ನಳೀನ್ ಕುಮಾರ್ ಕಟೀಲ್ ತೀವ್ರ ವಾಗ್ದಾಳಿ !