ಆಗಸ್ಟ್ 2 ರಂದು ಸಂಜೆ 7 ಗಂಟೆಗೆ ರಾಹುಲ್ ಗಾಂಧಿ (Rahul gandhi) ಜೊತೆ ಕೆ.ಸಿ ವೇಣುಗೋಪಾಲ್ (KC.Venugopal) ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ರಾಜ್ಯ ಉಸ್ತುವಾರಿ ಸಚಿವ ಸುರ್ಜೇವಾಲಾ (Surjewala) ಗೈರು ಆಗುವ ಸಾಧ್ಯತೆಯಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸುರ್ಜೇವಾಲಾ ವಿದೇಶಕ್ಕೆ ತೆರಳಿದ್ದಾರೆ.
ರಾಜ್ಯ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಬಗ್ಗೆ ರಾತ್ರಿ 8 ಗಂಟೆಗೆ ಹುಬ್ಬಳ್ಳಿಯ ಖಾಸಗಿ ಹೊಟೆಲ್ ನಲ್ಲಿ ರಾಹುಲ್ ಗಾಂಧಿ ಸಭೆ ಕರೆದಿದ್ದಾರೆ. ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಪಕ್ಷದ ಆಂತರಿಕ ಕಚ್ಚಾಟದ ಬಗ್ಗೆ ಗಂಭೀರ ಚರ್ಚೆ ನಡೆಸಲಿದ್ದಾರೆ. ಜೊತೆಗೆ ಆಂತರಿಕ ಸಮೀಕ್ಷೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಐದು ವಲಯವಾರು ರಾಜಕೀಯ ಬೆಳವಣಿಗೆ ಕುರಿತು ಮಾಹಿತಿ ನೀಡಲಿದ್ದಾರೆ. ಇದನ್ನು ಓದಿ :- ಕಾಮನ್ ವೆಲ್ತ್ ನಲ್ಲಿ ಬೆಳ್ಳಿ ಗೆದ್ದ ಸಂಕೇತ್ ಸರ್ಗರ್ ಗೆ ಮಹಾರಾಷ್ಟ್ರ ಸರ್ಕಾರದಿಂದ ಬಂಪರ್ ಬಹುಮಾನ ಘೋಷಣೆ
ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ. ಮಲ್ಲಿಕಾರ್ಜುನ ಖರ್ಗೆ, ಎಂ.ಬಿ ಪಾಟೀಲ್ , ಬಿ.ಕೆ.ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್, ವೀರಪ್ಪ ಮೋಯ್ಲಿ , ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ರಾಮಲಿಂಗರೆಡ್ಡಿ, ಈಶ್ವರ್ ಖಂಡ್ರೆ , ಸಲೀಂ ಅಹ್ಮದ್, ಡಿ.ಕೆ.ಸುರೇಶ್, ಯು.ಟಿ.ಖಾದರ್, ರಮೇಶ್ ಕುಮಾರ್, ಕೆ.ಜೆ.ಜಾರ್ಜ್, ಸುನೀಲ್ ಕನುಗೋಳ ಸೇರಿದಂತೆ ಕಮಿಟಿಯ ಸದಸ್ಯರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಇದನ್ನು ಓದಿ :- ಆ.2 ರಿಂದ 15ರವರೆಗೆ ರಾಷ್ಟ್ರಧ್ವಜವನ್ನು ನಿಮ್ಮ ಪ್ರೊಫೈಲ್ ಚಿತ್ರವಾಗಿ ಬಳಸಿ – ಪ್ರಧಾನಿ ನರೇಂದ್ರ ಮೋದಿ