ಗುತ್ತಿಗೆದಾರ ಸಂತೋಷ್ ಪಾಟಿಲ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರ ಮಧ್ಯೆಯೇ ಕೈ ಕೈ ಮಿಲಾಯಿಸುವ ಹಂತಕ್ಕೆ ವಾಗ್ವಾದ ನಡೆದಿದೆ. ಸಂತೋಷ್ ಮೃತದೇಹವನ್ನು ಬೆಳಗಾವಿಯಲ್ಲಿರುವ ಅವರ ಮನೆ ಮುಂದೆ ದರ್ಶನಕ್ಕೆ ಇಡಲಾಗಿತ್ತು.
ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಶಾಸಕಿ ಮಾತನಾಡಿ, ಸಂತೋಷ್ ಆತ್ಮಹತ್ಯೆಗೆ ನ್ಯಾಯ ಸಿಗಬೇಕು. ಜೊತೆಗೆ ಪರಿಹಾರ ಸಿಗಬೇಕು. ಅಲ್ಲಿಯವರೆಗೂ ಸಂತೋಷ್ ಅವರ ಮೃತದೇಹವನ್ನು ಕದಲಿಸುವುದು ಬೇಡಾ ಎಂದು ಹೇಳಿದ್ದಾರೆ. ಇದನ್ನು ಓದಿ :- ಸಚಿವ ಈಶ್ವರಪ್ಪ ರಾಜೀನಾಮೆ ನೀಡಲೇಬೇಕು – ಯತೀಂದ್ರ ಸಿದ್ದರಾಮಯ್ಯ
ಇದಕ್ಕೆ ಪ್ರತಿಕ್ರಿಯಿಸಿದ್ದ ಸಂತೋಷ್ ಸಂಬಂಧಿಗಳು ಅಂತ್ಯಕ್ರಿಯೆ ಮಾಡೋಣ. ಸಂತೋಷ್ ಮೃತದೇಹ ಇಟ್ಟು ಪ್ರತಿಭಟನೆ ಮಾಡುವುದು ಬೇಡ ಎಂದಿದ್ದರು. ಆ ಬಳಿಕ ಸಂತೋಷ್ ಪಾಟೀಲ್ ಸಂಬಂಧೀಕರ ಮಧ್ಯೆಯೇ ಕೈಕೈ ಮಿಲಾಯಿಸುವ ಹಂತಕ್ಕೆ ವಾಗ್ವಾದ ನಡೆದಿದೆ. ಕೂಡಲೇ ಅಲ್ಲಿದ್ದ ಗ್ರಾಮಸ್ಥರು ಮಧ್ಯಸ್ಥಿಕೆ ವಹಿಸಿ ಇಬ್ಬರನ್ನೂ ಶಾಂತ ಪಡಿಸಿದರು.
ಇದನ್ನು ಓದಿ :- ಗುತ್ತಿಗೆದಾರ ಸಂತೋಷ್ ಪಾಟೀಲ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕರು