ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (B.S YEDIURAPPA)ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣ ಸಂಬಂಧ ನೀಡಲಾಗಿದ್ದ ಮಧ್ಯಂತರ ರಕ್ಷಣೆ ಆದೇಶವನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆ ಮೂಲಕ ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ರಿಲೀಫ್ ಸಿಕ್ಕಂತಾಗಿದೆ.
ಡಿ ನೋಟಿಫಿಕೇಷನ್ ಪ್ರಕರಣ ಸಂಬಂಧ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಈ ಹಿಂದೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿರುವ ಸಾಮಾಜಿಕ ಕಾರ್ಯಕರ್ತ ಆಲಂಪಾಷ ಅವರು ಮಧ್ಯಂತರ ರಕ್ಷಣೆ ನೀಡಿದ್ದ ಆದೇಶ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾ.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಪ್ರಕರಣದ ಮುಖ್ಯ ಅರ್ಜಿ ವಿಚಾರಣೆ ಜನವರಿ 30ರಂದು ನಡೆಯಲಿದೆ.
ಇದನ್ನು ಓದಿ :- ನಾಳೆ KSRTC, BMTC ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ