ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬಡವರು, ದಲಿತರು, ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಶ್ರಮವಹಿಸಲಾಗುತ್ತಿದೆ. ನವಭಾರತಕ್ಕಾಗಿ ನವ ಕರ್ನಾಟಕ ಧ್ಯೇಯದೊಂದಿಗೆ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ದೇಶದ ಸ್ವಾತಂತ್ರ್ಯ ಅಮೃತಮಹೋತ್ಸದಡಿ ಶಾಲೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗುತ್ತಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ( THAWAR CHAND GELHOT ) ಹೇಳಿದ್ದಾರೆ.
ಭಾರತದ 74 ನೇ ಗಣರಾಜ್ಯೋತ್ಸವ – 2023#ಗಣರಾಜ್ಯೋತ್ಸವ https://t.co/2qXcH3fJXa
— Basavaraj S Bommai (@BSBommai) January 26, 2023
ಬೆಂಗಳೂರಿನ ಮಾಣಿಕ್ ಷಾ ಪರೇಡ್ ನಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡದಲ್ಲಿ ರಾಜ್ಯದ ಜನತೆಗೆ ಗಣರಾಜ್ಯೋತ್ಸವ ಶುಭಾಶಯಗಳು ತಿಳಿಸಿದರು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 6,478.76 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ ಯೋಜನೆಯಡಿ 13.47 ಕೋಟಿ ದಿನಗೂಲಿ ಉದ್ಯೋಗ ಸೃಷ್ಟಿಸಲಾಗಿದೆ. ಕಾರ್ಮಿಕರ ಖಾತೆಗೆ 4,110 ಕೋಟಿ ನೇರವಾಗಿ ಜಮೆ ಮಾಡಲಾಗಿದೆ. 2022ರಲ್ಲಿ 13.35 ಲಕ್ಷ ಮನೆಗಳಿಗೆ ಮೂಲಸೌಕರ್ಯ ಕಲ್ಪಿಸಲಾಗಿದೆ. ಇದಕ್ಕಾಗಿ 2314.34 ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನು ಓದಿ :- ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಂದ ಧ್ವಜಾರೋಹಣ
ಕಂದಾಯ ಗ್ರಾಮಗಳ ಘೋಷಣೆಯಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ. 2020-23ರ ಸಾಲಿನಲ್ಲಿ 20.19 ಲಕ್ಷ ರೈತರಿಗೆ ಬೆಳೆ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ 15,066 ಕೋಟಿ ಬೆಳೆ ಸಾಲ ನೀಡಲಾಗಿದೆ. ಮಹಿಳಾ ಸ್ವಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ಸಾಲ ನೀಡಲಾಗುವುದು. ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ಟ್ರಸ್ಟ್ ನಡಿ 32.32 ಲಕ್ಷ ನೋಂದಣಿಗಳಾಗಿವೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ :- ಎಸ್ಟಿ ಮೀಸಲಾತಿಗಾಗಿ ಚಳ್ಳಕೆರೆಯಲ್ಲಿ ಕಾಡುಗೊಲ್ಲರಿಂದ ಬೃಹತ್ ಪ್ರತಿಭಟನೆ- ಬೇಡಿಕೆ ಈಡೇರದಿದ್ದರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ