ಶಾರುಖ್ ಪುತ್ರನ ಡ್ರಗ್ಸ್ ಪತ್ತೆ ಪ್ರಕರಣ – ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ನಿಧನ

ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್‌ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಸಂಜೆ ಮೃತಪಟ್ಟಿದ್ದಾರೆ .

ಆರ್ಯನ್ ಖಾನ್ ಡ್ರಗ್ಸ್ ಕೇಸ್‌ – ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್‍ಗೆ ಹೃದಯಘಾತ – Public  TV


ಮೂಲಗಳ ಪ್ರಕಾರ ಪ್ರಭಾಕರ್ ಸೈಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಶಂಕಿಸಲಾಗಿದೆ. ಚೆಂಬೂರಿನ ಮಹುಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಅವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಪ್ರಭಾಕರ್ ಸೈಲ್ ಅವರು ಡ್ರಗ್ಸ್‌ ಪ್ರಕರಣದ ಮತ್ತೊಬ್ಬ ಪ್ರಮುಖ ಸಾಕ್ಷಿ ಕೆ.ಪಿ.ಗೋಸಾವಿ ಅವರ ಅಂಗರಕ್ಷಕರಾಗಿದ್ದರು. ಇದೀಗ ಅವರ ಸಾವು ಪ್ರಕರಣದ ವಿಚಾರಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ. 2021ರ ಅಕ್ಟೋಬರ್ 3ರಂದು ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ತನಿಖಾಧಿಕಾರಿಗಳು ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರೋಪದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಸುಮಾರು 20 ಜನರನ್ನು ಬಂಧಿಸಿದ್ದರು.

Aryan Khan drug case: Witness Prabhakar Sail, who alleged extortion by NCB  officials, dies | India News | Zee News

ಎನ್‌ಸಿಬಿ ದಾಳಿ ನಡೆಸಿದ ಸ್ಥಳದಲ್ಲಿ ಮತ್ತು ಎನ್‌ಸಿಬಿ ಕಚೇರಿಯಲ್ಲಿ ಕಾಣಿಸಿಕೊಂಡಿದ್ದ ಗೋಸಾವಿ, ಶಾರುಕ್‌ ಪುತ್ರ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿ ಫೋಟೊ ಮತ್ತು ವಿಡಿಯೊ ತೆಗೆದಿದ್ದರು. ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ತಾನು ಸ್ವತಂತ್ರ ತನಿಖಾಧಿಕಾರಿ ಎಂದು ಗೋಸಾವಿ ಹೇಳಿಕೊಂಡಿದ್ದರು. ಆದರೆ, ಎನ್‌ಸಿಬಿ ಅವರನ್ನು ಡ್ರಗ್ಸ್‌ ಪ್ರಕರಣದಲ್ಲಿ ‘ಸ್ವತಂತ್ರ ಸಾಕ್ಷಿ’ ಎಂದು ಘೋಷಿಸಿತ್ತು. ಆರ್ಯನ್‌ ಖಾನ್‌ ಬಿಡುಗಡೆಗೆ ಎನ್‌ಸಿಬಿಯ ಅಧಿಕಾರಿಯೊಬ್ಬರು ಮತ್ತು ಕೆ.ಪಿ.ಗೋಸಾವಿ ಸಹಿತ ಇತರ ವ್ಯಕ್ತಿಗಳು 25 ಕೋಟಿ ಲಂಚ ರೂ ಕೇಳಿದ್ದರು. ಇದರಲ್ಲಿ 8 ಕೋಟಿ ರೂ ಹಣವನ್ನು ಎನ್‌ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರಿಗೆ ನೀಡಬೇಕೆಂದು ಗೋಸಾವಿ ಹೇಳಿದ್ದಾಗಿ ಪ್ರಭಾಕರ್ ಸೈಲ್ ಆರೋಪಿಸಿದ್ದರು. ಸೈಲ್ ಮಾಡಿದ್ದ ಆರೋಪಗಳನ್ನು ಸಮೀರ್ ವಾಂಖೆಡೆ ಅಲ್ಲಗಳೆದಿದ್ದರು.

ಇದನ್ನು ಓದಿ :- Shivamogga NIA Report – ಶಿವಮೊಗ್ಗ ಹರ್ಷ ಕೊಲೆ ಹಿಂದೆ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಹುನ್ನಾರ – ಎನ್‌ಐಎ ವರದಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!