ಸಿದ್ದರಾಮಯ್ಯ ಆರ್ಯರಾ? ಅಥವಾ ದ್ರಾವಿಡರಾ? ಅನ್ನೋದನ್ನು ಮೊದಲು ಹೇಳಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಆರ್.ಟಿ. ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಆರ್ಎಸ್ಎಸ್ ಮೂಲದ ಬಗ್ಗೆ ಪ್ರಶ್ನಿಸಿದ್ದ ಸಿದ್ದರಾಮಯ್ಯರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಮೊದಲು ಸಿದ್ದರಾಮಯ್ಯ ಎಲ್ಲಿಂದ ಬಂದಿದ್ದಾರೆ ಅಂತ ಹೇಳಲಿ. ಸಿದ್ದರಾಮಯ್ಯ ಆರ್ಯರಾ? ದ್ರಾವಿಡರಾ?.ಮೊದಲು ಅವರು ಹೇಳಲಿ ಎಂದು ಮರು ಸವಾಲು ಹಾಕಿದರು.
ಪಠ್ಯ ಪುಸ್ತಕ ಪರಿಶೀಲನಾ ಸಮಿತಿಯಿಂದ ರೋಹಿತ್ ಚಕ್ರತೀರ್ಥರನ್ನು ಕೈಬಿಡಬೇಕೆಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಈ ವಿಚಾರಗಳ ಬಗ್ಗೆ ಶಿಕ್ಷಣ ಸಚಿವರಿಂದ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದ್ರು. ಇದನ್ನೂ ಓದಿ : – ಕೆಜಿಎಫ್ ಬಾಬು ಮನೆ ಮೇಲೆ ED ರೇಡ್
ಹಿಜಾಬ್ ವಿವಾದ ಮಾಡುವ ಅಗತ್ಯ ಇಲ್ಲ. ಈಗಾಗಲೇ ಕೋರ್ಟ್ ತನ್ನ ಆದೇಶ ಕೊಟ್ಟಿದೆ. ಎಲ್ಲರೂ ಕೋರ್ಟ್ ಆದೇಶ ಪಾಲಿಸಬೇಕು. ಶೇ.99.99ರಷ್ಟು ಮಂದಿ ಕೋರ್ಟ್ ಆದೇಶ ಪಾಲಿಸಿದ್ದಾರೆ. ಹಿಜಾಬ್ ಬಗ್ಗೆ ಮಂಗಳೂರು ವಿವಿ ಸಿಂಡಿಕೇಟ್ ನಿರ್ಣಯ ತೆಗೆದುಕೊಂಡಿದೆ. ಆಡಳಿತ ಮಂಡಳಿ ಏನು ನಿರ್ಧಾರ ಮಾಡುತ್ತಾರೋ ಅದನ್ನು ಪಾಲಿಸಬೇಕು. ಸಿಂಡಿಕೇಟ್ ಸಹ ಕೋರ್ಟ್ ಆದೇಶ ಪಾಲಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಹಿಜಾಬ್ ಬಿಟ್ಟು ವಿದ್ಯಾರ್ಜನೆ ಕಡೆ ಗಮನ ಕೊಡಲಿ ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ : – ಲಕ್ಷ್ಮಣ ಸವದಿಗೆ ಸಿಹಿ ತಿನಿಸಿ ಶುಭ ಕೋರಿದ ಸಿಎಂ ಬೊಮ್ಮಾಯಿ