ಸವದತ್ತಿ ಯಲ್ಲಮ್ಮ (savadatti yellamma) ಕ್ಷೇತ್ರದಿಂದ ಸಿದ್ದರಾಮಯ್ಯ (Siddaramaiah) ಅಥವಾ ಸತೀಶ್ ಜಾರಕಿಹೊಳಿ (satish jarakiholi) ಸ್ಪರ್ಧೆ ಮಾಡಲಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆಗೆ ರಾಜ್ಯದ ಹಲವು ಕ್ಷೇತ್ರದಲ್ಲಿ ತಯಾರಿ ನಡೆದಿದೆ.
ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆ (Vidhanasabha election) ಗೆ ಇನ್ನೂ 11 ತಿಂಗಳು ಬಾಕಿ ಇದೆ. ಆದರೇ ಈಗಿನಿಂದಲೇ ರಾಜಕೀಯ ನಾಯಕರು ಕ್ಷೇತ್ರ ಬದಲಾವಣೆ, ಹೊಸ ಕ್ಷೇತ್ರ ಹುಡುಕಾಟದ ಆರಂಭದಲ್ಲಿದ್ದಾರೆ. ಕೆಲ ನಾಯಕರು ಸುರಕ್ಷಿತ ಕ್ಷೇತ್ರ ಹುಡುಕಾಟದಲ್ಲಿ ಸಕ್ರಿಯರಾಗಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವ ಕುತೂಹಲವಿದೆ. ಸವದತ್ತಿ ಕ್ಷೇತ್ರದ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದಾರೆ. ಸವದತ್ತಿ ಕ್ಷೇತ್ರದ ಮೇಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಣ್ಣಿಟ್ಟಿದ್ದಾರೆ. ಚಾಮರಾಜಪೇಟೆ, ಕೋಲಾರ, ಕೊಪ್ಪಳ ಹಾಗೂ ಬದಾಮಿಯಲ್ಲಿ ಸ್ಪರ್ಧೆ ಬಗ್ಗೆ ಚಿಂತನೆ ನಡೆದಿದೆ. ಇದನ್ನೂ ಓದಿ :- ಡಿ.ಕೆ.ಶಿವಕುಮಾರ್ ಗೆ ಮತ್ತೆ ED ಕಂಟಕ
ಈ ಪಟ್ಟಿಗೆ ಸವದತ್ತಿ ಯಲ್ಲಮ್ಮ ಕ್ಷೇತ್ರ ಸೇರ್ಪಡೆಯಾಗಿದ್ದು, ಸವದತ್ತಿಯಿಂದಲೇ ಸಿದ್ದರಾಮಯ್ಯ ಸ್ಪರ್ಧೆ ಮಾಡ್ತಾರೆ ಎಂಬ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಚರ್ಚ ನಡೆದಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಇಲ್ಲವೇ ಸತೀಶ ಜಾರಕಿಹೊಳಿ ಸ್ಪರ್ಧೆ ಬಗ್ಗೆ ಚಿಂತನೆ ನಡೆದಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಮ್ಮ ಪುತ್ರ ರಾಹುಲ್ (Rahul) ಗೆ ಯಮಕನಮರಡಿ ಕ್ಷೇತ್ರ ಬಿಟ್ಟು ಕೊಡುವ ಸಾಧ್ಯತೆಯಿದೆ. ಇದನ್ನೂ ಓದಿ :- ಕೊಡಗಿನಲ್ಲಿ ಮಧ್ಯರಾತ್ರಿ ಮತ್ತೆ ಭೂಕಂಪನ