ರಾಜಸ್ಥಾನ ಕಾಂಗ್ರೆಸ್ನಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದೆ. ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬಿರುಗಾಳಿಯನ್ನೇ ಎಬ್ಬಿಸಿದ್ದಾರೆ. ತಡ ಮಾಡದೇ ನನ್ನನ್ನು ರಾಜಸ್ಥಾನದ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಸಚಿನ್ ಪೈಲಟ್ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಆಗ್ರಹಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇದ್ದು, ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ಬರುವ ಇಂಗಿತವನ್ನು ಸಚಿನ್ ಪೈಲಟ್ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ನನ್ನನ್ನು ತಕ್ಷಣ ಸಿಎಂ ಆಗಿ ಘೋಷಿಸದಿದ್ದರೆ ಪಂಜಾಬ್ನಂತೆಯೇ ರಾಜಸ್ಥಾನವನ್ನು ಕೂಡ ಕಳೆದುಕೊಳ್ಳಬೇಕಾಗುತ್ತದೆ ಎಂದು ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾಗೆ ಸಚಿನ್ ಪೈಲಟ್ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಪಂಜಾಬ್ನಲ್ಲಿ ಕೊನೆ ಘಳಿಗೆಯಲ್ಲಿ ಚರಣ್ಜೀತ್ ಸಿಂಗ್ ಚನ್ನಿ ಅವರನ್ನು ಸಿಎಂ ಆಗಿ ಮಾಡಲಾಗಿತ್ತು.
ಆದ್ದರಿಂದ ಅಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಬೇಕಾಯಿತು ಎಂಬುದನ್ನು ಪೈಲಟ್ ಕೈ ನಾಯಕರಿಗೆ ನೆನಪಿಸಿದ್ದಾರೆ ಎನ್ನಲಾಗಿದೆ. ಸಚಿನ್ ಪೈಲಟ್ ಕಳೆದ ಕೆಲ ದಿನಗಳಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ :- ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಕೇಂದ್ರದ ಕುಮ್ಮಕ್ಕಿದೆ – ಸಿದ್ದರಾಮಯ್