ಪ್ರಧಾನಿ ನರೇಂದ್ರ ಮೋದಿ (NARENDRA MODI )ನೇತೃತ್ವದ ಬಿಜೆಪಿ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ನ ಮೂರು ದಿನಗಳ ಚಿಂತನ ಶಿಬಿರಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ( SONIYA GHANDHI )ಚಾಲನೆ ನೀಡಿದ್ದಾರೆ.
ಕೇಂದ್ರ ಸರ್ಕಾರವು ಅಲ್ಪಸಂಖ್ಯಾತರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿದೆ ಮತ್ತು ಮಹಾತ್ಮ ಗಾಂಧಿ ಕೊಲೆಗಡುಕರನ್ನು ವೈಭವೀಕರಿಸುತ್ತಿದೆ ಎಂದು ಆರೋಪಿಸಿದ್ದಾರೆ. ಜವಾಹರಲಾಲ್ ನೆಹರೂ ಅವರಂತಹ ನಾಯಕರು ಮಾಡಿದ ಕೆಲಸಗಳನ್ನು ಇತಿಹಾಸದಿಂದ ಅಳಿಸಲಾಗುತ್ತಿದೆ ಎಂದು ಟೀಕಿಸಿದ್ದಾರೆ.ಈ ಶಿಬಿರದ ಬಳಿಕ ಕಾಂಗ್ರೆಸ್ ನಲ್ಲಿ ಒಂದು ಕುಟುಂಬ, ಒಂದೇ ಟಿಕೆಟ್ ನಿಯಮ ಜಾರಿಗೆ ಬರೋ ಸಾಧ್ಯತೆ ಇದೆ. ಒಂದು ಕುಟುಂಬ, ಒಂದೇ ಟಿಕೆಟ್ ನಿಯಮಕ್ಕೆ ಕಾಂಗ್ರೆಸ್ ನಲ್ಲಿ ಸಂಪೂರ್ಣ ಸಹಮತವಿದೆ. ಚಿಂತನ ಶಿಬಿರದ ನಂತರ ಪಕ್ಷದಲ್ಲಿ ದೊಡ್ಡ ಮಟ್ಟದಲ್ಲಿ ಸಾಂಸ್ಥಿಕ ಬದಲಾವಣೆಗಳಾಗಲಿವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಜಯ್ ಮಾಕೆನ್ ಹೇಳಿದ್ದಾರೆ. ಇದನ್ನೂ ಓದಿ : – ಪೊಲೀಸರಿಗೆ ಹೆದರಿ ಎರಡು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಚಿಂತಾಜನಕ
ಕಾಂಗ್ರೆಸ್ಗೆ ಇರುವ ಐದು ರಾಜಕೀಯ ಸವಾಲುಗಳನ್ನು ತೆರೆದಿಟ್ಟ ಮಲ್ಲಿಕಾರ್ಜುನ ಖರ್ಗೆ 2024ರಲ್ಲಿ ನಡೆಯಲಿರುವ ರಾಷ್ಟ್ರೀಯ ಚುನಾವಣೆಯಲ್ಲಿ ದೇಶದ ಪ್ರಮುಖ ವಿರೋಧ ಪಕ್ಷಗಳ ಜತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದನ್ನು ಬೆಂಬಲಿಸಿದ್ದಾರೆ. ಈ ನವ ಸಂಕಲ್ಪ ಶಿಬಿರದಲ್ಲಿ ರಾಜ್ಯ ನಾಯಕರ ಸಮ್ಮಿಲನವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಕೇಂದ್ರ ಸಚಿವರಾದ ಎಂ. ವೀರಪ್ಪ ಮೊಯ್ಲಿ, ಮಾರ್ಗರೇಟ್ ಆಳ್ವ ಸೇರಿದಂತೆ ರಾಜ್ಯದ ಕಾಂಗ್ರೆಸ್ ನಾಯಕರು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ : – ಸ್ವಾಮೀಜಿ ವೇಷಧರಿಸಿ ತಲೆಮರೆಸಿಕೊಂಡಿದ್ದ ಆ್ಯಸಿಡ್ ನಾಗ ಅರೆಸ್ಟ್