2023-24ನೇ ಸಾಲಿನ ಬಜೆಟ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ 17 ರಂದು ಸಿಎಂ ಬೊಮ್ಮಾಯಿ (BASAVRAJ BOMMAI) ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದು ನಡೆದ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ದಿನಾಂಕ ನಿಗದಿ ಮಾಡಲಾಯ್ತು. ಕ್ಯಾಬಿನೆಟ್ ಬಳಿಕ ಸುದ್ದಿಗೋಷ್ಟಿ ನಡೆಸಿದ ಮಾಧುಸ್ವಾಮಿ (MADHUSWAMY ) ಅಧಿವೇಶನದ ಬಗ್ಗೆ ಮಾಹಿತಿ ನೀಡಿದರು.
ಚುನಾವಣೆ ವರ್ಷ ಆಗಿರುವುದರಿಂದ ಈ ಬಾರಿ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನವನ್ನ ಏಕಕಾಲದಲ್ಲಿ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ ಎಂದು ತಿಳಿಸಿದರು. ಫೆಬ್ರವರಿ 10 ರಂದು ಜಂಟಿ ಅಧಿವೇಶನ ಪ್ರಾರಂಭವಾಗಲಿದೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೊಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ 17 ರಂದು ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿಸಿದರು. ಎಷ್ಟು ದಿನ ಅಧಿವೇಶನ ನಡೆಸಬೇಕು ಅಂತ ತೀರ್ಮಾನ ಮಾಡಿಲ್ಲ. ಬಿಎಸಿ ಸಭೆಯಲ್ಲಿ ಸಮಯ ನಿಗದಿ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ರು.
ಇದನ್ನು ಓದಿ :- ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಮಾಜಿ ಡಿ.ಸಿ.ಎಂ ಜಿ.ಪರಮೇಶ್ವರ್