ಪ್ರವಾದಿ ಕುರಿತ ಹೇಳಿಕೆ ವಿವಾದ ಸಂಬಂಧ ಬಂಗಾಳದಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರ ಪ್ರಸ್ತುತ ನಿಯಂತ್ರಣದಲ್ಲಿದೆ. ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಮುಂದುವರಿಸಲಾಗಿದೆ.
ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ. .ಹೌರಾ ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ. ಜಿಲ್ಲೆಯಾದ್ಯಂತ ಇಂಟರ್ನೆಟ್ ಸೇವೆಗಳನ್ನು ಜೂನ್ 13 ರವರೆಗೆ ಸ್ಥಗಿತಗೊಳಿಸಲಾಗಿದೆ. ಇದೇ ವೇಳೆ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷರನ್ನು ಬಂಧಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ಈ ವರೆಗೂ 227 ಮಂದಿಯನ್ನು ಬಂಧಿಸಲಾಗಿದೆ.
ಶುಕ್ರವಾರದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಿಂದ ಒಟ್ಟು 227 ಜನರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿತರ ಪೈಕಿ 68 ಮಂದಿಯನ್ನು ಪ್ರಯಾಗ್ ರಾಜ್ ನಿಂದ ಮತ್ತು 50 ಜನರನ್ನು ಹತ್ರಾಸ್‌ನಿಂದ ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ : – ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆ – ಬಂಧನಕ್ಕೆ ಆಗ್ರಹ