SSLC Exam- ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು !

ಮೈಸೂರಿನ ತಿ.ನರಸೀಪುರದಲ್ಲಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ದುರ್ಘಟನೆ ನಡೆದಿದೆ.

ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದು ಕೂಡಲೇ ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ವಿದ್ಯಾರ್ಥಿನಿ ಅನುಶ್ರೀ ಸಾವನ್ನಪ್ಪಿದ್ದಾರೆ. ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತ ವಿದ್ಯಾರ್ಥಿನಿ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಟಿ ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ :- SSLC ಪರೀಕ್ಷೆಯಲ್ಲಿ ಗೋಲ್ ಮಾಲ್ – ಚಿಕ್ಕೋಡಿಯಲ್ಲಿ 6 ವಿದ್ಯಾರ್ಥಿಗಳ ಬಂಧನ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!