ಮಂಡ್ಯ (MANDYA) ದಲ್ಲಿ ಸುಮಲತಾ ಅಂಬರೀಶ್ (SUMALATHA AMBARISH)ಬೆಂಬಲಿಗರ ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ರಾಜ್ಯ ರಾಜಕಾರಣಕ್ಕೆ ಸುಮಲತಾ ಬರಲೇ ಬೇಕೆಂದು ನಿರ್ಧಾರ ಕೈಗೊಳ್ಳಲಾಗಿದೆ.
ಬಹುತೇಕ ಬೆಂಬಲಿಗರಿಂದ ರಾಜ್ಯ ರಾಜಕೀಯಕ್ಕೆ ಬರಲೇ ಬೇಕೆಂಬ ಒತ್ತಾಯ ಕೇಳಿಬಂದಿದೆ. ಏಳು ವಿಧಾನಸಭಾ ಕ್ಷೇತ್ರದಿಂದ ಸಭೆಗೆ ಆಗಮಿಸಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕುರಿತು ತಮ್ಮದೆ ಅಭಿಪ್ರಾಯ ವ್ಯಕ್ತಪಡಿಸಿದರು. ಅರ್ಧದಷ್ಟು ಬೆಂಬಲಿಗರು ಕೈ ಪರ ಒಲವು ತೋರಿದರೆ ಇನ್ನುಳಿದ ಬೆಂಬಲಿಗರು ಬಿಜೆಪಿ ಪರ ಬ್ಯಾಟ್ ಬೀಸಿದ್ದಾರೆ. ಇದನ್ನು ಓದಿ :- ಕೋಲಾರದಲ್ಲಿ ಒಕ್ಕಲಿಗ ಸಮುದಾಯದಿಂದ ಸಿದ್ದರಾಮಯ್ಯ ಸ್ಪರ್ಧೆಗೆ ಬೆಂಬಲ ಘೋಷಣೆ…!
ಆದರೆ ಮದ್ದೂರು ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸ ಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನು, ಸುಮಲತಾ ವಿರುದ್ದ ಶಾಸಕ ಪುಟ್ಟರಾಜು (PUTTARAJU)ಹೇಳಿಕೆ ವಿಚಾರವಾಗಿ ಮುಂದಿನ ದಿನಗಳಲ್ಲಿ ಶಾಸಕರ ವಿರುದ್ದ ಪ್ರತಿಭಟನೆ ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ.
ಇದನ್ನು ಓದಿ :- ಬಳ್ಳಾರಿಯಲ್ಲಿ ಸಹೋದರನ ವಿರುದ್ಧ ಪತ್ನಿಯನ್ನು ಕಣಕ್ಕಿಳಿಸಿದ ಜನಾರ್ದನ ರೆಡ್ಡಿ