ದಿವಂಗತ ಪ್ರಧಾನಿ ರಾಜೀವ್ ಗಾಂಧಿ (Rajiv gandhi) ಅವರ ಹತ್ಯೆ ಪ್ರಕರಣದ ಆರು ಹಂತಕರನ್ನು ಜೈಲಿನಿಂದ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ (Supreme court) ಆದೇಶ ನೀಡಿದೆ. ನಳಿನಿ ಶ್ರೀ ಹರನ್ ಅಲ್ಲದೇ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ಜೈಲಿನಲ್ಲಿದ್ದಾರೆ.
ಮೇ 21, 1991ರಲ್ಲಿ ತಮಿಳುನಾಡಿನ ಪೆರಂಬೂರಿನಲ್ಲಿ ಎಲ್ ಟಿಟಿಐ ಗುಂಪಿನ ಮಹಿಳಾ ಆತ್ಯಾಹುತಿ ಬಾಂಬರ್ ಗಳಿಂದ ರಾಜೀವ್ ಗಾಂಧಿ ಅವರ ಹತ್ಯೆಯಾಗಿತ್ತು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳಾದ ನಳಿನಿ ಶ್ರೀಹರನ್ ಮತ್ತು ಆರ್ ಪಿ ರವಿಚಂದ್ರನ್ ಅವರನ್ನು ಅವಧಿಗೂ ಮೊದಲೇ ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಶಿಫಾರಸು ಮಾಡಿತ್ತು. ನಾವು ಈಗಾಗಲೇ 30 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ್ದೇವೆ. ರಾಜೀವ್ ಗಾಂಧಿಯ ಕೊಲೆಯ 7 ಅಪರಾಧಿಗಳ ಶಿಕ್ಷೆಯ ಅವಧಿಯನ್ನು ಕಡಿಮೆ ಮಾಡಲು ತಮಿಳುನಾಡು ಸರ್ಕಾರ 4 ವರ್ಷಗಳ ಹಿಂದೆಯೇ ಒಪ್ಪಿಕೊಂಡಿತ್ತು ಎಂದು ಅಪರಾಧಿಗಳಾದ ಎಸ್ ನಳಿನಿ ಮತ್ತು ಆರ್ ಪಿ ರವಿಚಂದ್ರನ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು. ಇದೀಗ ಮಾಜಿ ಪ್ರಧಾನಿಯನ್ನು ಹತ್ಯೆ ಮಾಡಿದ ಅಪರಾಧಿಗಳನ್ನು ಬಿಡುಗಡೆಗೊಳಿಸುವಂತೆ ಸುಪ್ರೀಂ ಆದೇಶ ನೀಡಿದೆ.
ಇದನ್ನೂ ಓದಿ : – ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆಗೊಳಿಸಿದ ಮೋದಿ