ಮೈಸೂರು ( mysuru ) ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರೆದಿದ್ದು, 11 ವರ್ಷದ ಬಾಲಕನನ್ನ ಬಲಿ ಪಡೆದು ದೇಹವನ್ನು ಚಿರತೆಯು ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಹೊರಳಹಳ್ಳಿ ಗ್ರಾಮದ ಜಯಂತ್ (11) ವರ್ಷ ಮೃತ ಬಾಲಕ. ಘಟನಾ ಸ್ಥಳದಿಂದ 1 ಕಿಮೀ ದೂರದಲ್ಲಿ ಬಾಲಕನ ಮೃತ ದೇಹ ಪತ್ತೆಯಾಗಿದ್ದು, ಬಾಲಕನ ದೇಹವನ್ನ ವ್ಯಾಘ್ರ ಚಿರತೆ ತಿಂದು ಹಾಕಿದೆ. ಇನ್ನು ತಾಲ್ಲೂಕಿನ ಜನತೆಯಲ್ಲಿ ಆತಂಕ ಮನೆ ಮಾಡಿದ್ದು, ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿ :- ಅಧ್ಯಕ್ಷ…ಅಧ್ಯಕ್ಷ…ಹಾಡಿಗೆ ಹೆಜ್ಜೆ ಹಾಕಿದ ಶ್ರೀ ರಾಮುಲು