ತೆರಿಗೆ ಕಡಿತ ಕುರಿತು ಪರಿಶೀಲನೆ ನಡೆಸಲಾಗುತ್ತದೆ – ಸಿಎಂ ಬೊಮ್ಮಾಯಿ

ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದ್ದು, ರಾಜ್ಯದಲ್ಲಿಯೂ ತೆರಿಗೆ ಕಡಿತ ಕುರಿತು ಪರಿಶೀಲನೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

UK petrol price jumps above £1.50 as oil costs rise - BBC News

ದಾವೋಸ್ ಪ್ರವಾಸಕ್ಕೆ ತೆರಳುವುದಕ್ಕೂ ಮುನ್ನ ಮಾತನಾಡಿದ ಅವರು, ಇಂದು ಸ್ವಿಟ್ಜರ್ಲೆಂಡ್ನ ದಾವೋಸ್ಗೆ ತೆರಳುತ್ತಿದ್ದು ನಾಳೆ ಮತ್ತು 24ರಂದು ನಡೆಯಲಿರುವ ‘ವಿಶ್ವ ಆರ್ಥಿಕ ಶೃಂಗ’ದಲ್ಲಿ ಭಾಗಿಯಾಗುತ್ತೇನೆ. ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗುವೆ. ಹೂಡಿಕೆದಾರರನ್ನು ಸೆಳೆಯಲು ಎಲ್ಲ ಪ್ರಯತ್ನ ನಡೆಸಲಾಗುತ್ತದೆ ಎಂದು ಹೇಳಿದರು. ಈ ತ್ರೈಮಾಸಿಕದಲ್ಲಿ ಭಾರತಕ್ಕೆ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಹರಿದುಬಂದಿದೆ. ಇದನ್ನೂ ಓದಿ :-  ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ – ಸಿಎಂ ಬೊಮ್ಮಾಯಿ ಟ್ವೀಟ್

ಕಳೆದ ನಾಲ್ಕು ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿಹೆಚ್ಚು ಬಂಡವಾಳ ಹರಿದು ಬಂದಿತ್ತು. ಈ ಬಾರಿಯೂ ನಮಗೆ ಹೆಚ್ಚು ಬಂಡವಾಳ ಹರಿದು ಬಂದಿದೆ. ಇನ್ನೂ ಹಲವರು ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶೇಷವಾಗಿ ನವೆಂಬರ್ನಲ್ಲಿ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಮಾಡುತ್ತಿದ್ದೇವೆ. ಅದಕ್ಕೆ ದಾವೋಸ್ ಪ್ರವಾಸದಲ್ಲಿ ದೊಡ್ಡ ಸ್ಪಂದನೆ ಸಿಗಲಿದೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದ್ರು.

ಇದನ್ನೂ ಓದಿ :- ಪೆಟ್ರೋಲ್-ಡೀಸೆಲ್ ದರ ಇಳಿಕೆ ಮಾಡಿದ ನಂತರ ಬೆಂಗಳೂರಿನಲ್ಲಿ ತೈಲ ಬೆಲೆ ಹೇಗಿದೆ?

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!