ಮಂಡ್ಯದಲ್ಲಿ 2 ಕಾರುಗಳ ನಡುವೆ ಭೀಕರ ಅಪಘಾತ – ಸ್ಧಳದಲ್ಲೇ ಐವರು ಸಾವು

ಬೆಂಗಳೂರು- ಮಂಗಳೂರು ( BANGALORE - MANGALORE )ರಾಷ್ಟ್ರೀಯ ಹೆದ್ದಾರಿಯ ತಿಟ್ಟನಹೊಸಹಳ್ಳಿ ಗೇಟ್ ಬಳಿ ಇನೋವಾ ಕಾರು ಮತ್ತು ಸ್ವಿಫ್ಟ್ ಕಾರುಗಳ ನಡುವೆ ಅಪಘಾತ ಸಂಭವಿಸಿ 5 ಮಂದಿ ಸ್ಥಳದಲ್ಲಿ ಸಾವನ್ನಪ್ಪಿದ್ದು,

ಬೆಂಗಳೂರು- ಮಂಗಳೂರು ( BANGALORE – MANGALORE )ರಾಷ್ಟ್ರೀಯ ಹೆದ್ದಾರಿಯ ತಿಟ್ಟನಹೊಸಹಳ್ಳಿ ಗೇಟ್ ಬಳಿ ಇನೋವಾ ಕಾರು ಮತ್ತು ಸ್ವಿಫ್ಟ್ ಕಾರುಗಳ ನಡುವೆ ಅಪಘಾತ ಸಂಭವಿಸಿ 5 ಮಂದಿ ಸ್ಥಳದಲ್ಲಿ ಸಾವನ್ನಪ್ಪಿದ್ದು, 5 ಮಂದಿ ಗಾಯಗೊಂಡಿದ್ದಾರೆ. ಇನ್ನೋವಾ ಕಾರಿನಲ್ಲಿದ್ದ ಹಾಸನ ಮೂಲದ ಶ್ರೀನಿವಾಸಮೂರ್ತಿ(74), ಜಯಂತಿ(60), ಪ್ರಭಾಕರ್ (75) ಹಾಗೂ ತಮಿಳುನಾಡು ಮೂಲದ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. 

ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿರುವ ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ. ವಿಶ್ವೇಶ್ವರ ಭಟ್(50), ಎಂಜಿನಿಯರಿಂಗ್ ವಿದ್ಯಾರ್ಥಿಗಳಾದ ಅಚಲ್, ಗೌತಮ್, ಕೇವಿನ್, ಸರ್ವೇಶ್ ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವ ತಮಿಳುನಾಡಿನ ಇಬ್ಬರ ಹೆಸರು ತಿಳಿದು ಬಂದಿಲ್ಲ. ಬೆಂಗಳೂರಿನಿಂದ ಹಾಸನದ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು, ರಸ್ತೆಯ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಹಾಸನ (HASSAN ) ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಭೇಟಿ ನೀಡಿದ್ದಾರೆ. ಕಾರುಗಳಲ್ಲಿದ್ದ ಐದು ಮಂದಿ ಮೃತರ ಶವಗಳನ್ನು ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.  ಇದನ್ನು ಓದಿ : –  72ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್

ಬಿಂಡಿಗನವಿಲೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಕ್ಕೆ ರಾತ್ರಿ ಸುರಿಯುತ್ತಿದ್ದ ಜಿಟಿಜಿಟಿ ಮಳೆಯೂ ಕಾರಣವಾಗಿದೆ. ಹೀಗಿದ್ದರೂ ಹೈವೆಯವರಾಗಲಿ, ಪೋಲಿಸರಾಗಲಿ ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಇದನ್ನು ಓದಿ : –  ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯ್ತಾ..? – ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!