ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿಚಾರದ ನಡುವೆ ಪಶು ಸಂಗೋಪನಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಅದರಂತೆ, ಇನ್ನು ಮುಂದೆ ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ ನೀಡಲಾಗಿದೆ.
ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನುಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ ಕಡ್ಡಾಯವಾಗಿ ಇರಲಿದೆ. ಪ್ರಾಣಿ ವಧೆ ಮಾಡುವ ಮುನ್ನ ಸ್ಟನ್ನಿಂಗ್ ಮಾಡಿಸಲೇಬೇಕು ಎಂದು ಹೇಳಲಾಗಿದೆ. ಕೋಳಿ, ಕುರಿ ಅಂಗಡಿಗಳಿಗೆ ಈ ಬಗ್ಗೆ ಸುತ್ತೋಲೆ ಹೊರಡಿಸಿ ಪಶುಸಂಗೋಪನಾ ಇಲಾಖೆ ಆದೇಶ ಹೊರಡಿಸಿದೆ.
ಇದನ್ನು ಓದಿ :- ಹಲಾಲ್ VS ಜಟ್ಕಾ ಕಟ್ – ಯುಗಾದಿಗೆ ಮೊದಲು ಭುಗಿಲೆದ್ದ ಮತ್ತೊಂದು ವಿವಾದ
ಸ್ಟನ್ನಿಂಗ್ ಎಂದರೆ ಪ್ರಾಣಿಗಳನ್ನು ವಧೆ ಮಾಡುವ ಮೊದಲು ಪ್ರಜ್ಞೆ ತಪ್ಪಿಸುವ ವಿಧಾನ ಆಗಿದೆ. ಪ್ರಜ್ಞೆ ತಪ್ಪಿಸುವುದರಿಂದ ಪ್ರಾಣಿಗಳನ್ನು ಸಾಯಿಸುವಾಗ ಅವುಗಳಿಗೆ ನೋವು ತಿಳಿಯುವುದಿಲ್ಲ. ಯಾವುದೇ ಅಂಗಡಿಗಳಲ್ಲಿ ಇದನ್ನು ಪಾಲನೆ ಮಾಡದ ಹಿನ್ನೆಲೆ, ಅನೇಕ ದೂರುಗಳು ಪಶು ಸಂಗೋಪನಾ ಇಲಾಖೆಗೆ ಬಂದಿದ್ದವು. ಹೀಗಾಗಿ ಈಗ ಆದೇಶ ಹೊರಡಿಸಲಾಗಿದೆ.
ಇದನ್ನು ಓದಿ :- ಹಲಾಲ್ ವಿರೋಧಿ ಅಭಿಯಾನದ ಬಗ್ಗೆ ಸಿಎಂ ಬೊಮ್ಮಾಯಿ ಹೇಳೋದೇನು ಗೊತ್ತಾ..?