ಕನ್ನಡ (Kannada), ಹಿಂದಿ (Hindi), ತಮಿಳು(Tamil) ಸೇರಿದಂತೆ ವಿವಿಧ ಭಾಷೆಯ ಸಿನಿಮಾಗಳಲ್ಲಿ ಹಿನ್ನೆಲೆ ಗಾಯಕರಾಗಿ (Play back singer) ಅತಿದೊಡ್ಡ ಹೆಸರು ಮಾಡಿದ್ದ ಕೃಷ್ಣಕುಮಾರ್ ಕುನ್ನತ್ (53)(Krishna kumar kunnath) ವಿಧಿವಶರಾಗಿದ್ದಾರೆ.
ನಿನ್ನೆ ರಾತ್ರಿ ಹೃದಯಾಘಾತದಿಂದ(Heart attack) ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಕೋಲ್ಕತ್ತಾದಲ್ಲಿ(Kolkata) ಆಯೋಜನೆ ಮಾಡಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ತದನಂತರ ಹೋಟೆಲ್ ತಲುಪಿದಾಗ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡು ಬಂದಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆಸ್ಪತ್ರೆಗೆ ತಲುಪುವ ಮೊದಲೇ ವಿಧಿವಶರಾಗಿದ್ದರು ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗ್ತಿದೆ.
ಕೋಲ್ಕತ್ತಾದಲ್ಲಿ ಆಯೋಜನೆ ಮಾಡಲಾಗಿದ್ದ ಕಾನ್ಸರ್ಟ್ನಲ್ಲಿ ಪಾಲ್ಗೊಂಡಿದ್ದ ಕೃಷ್ಣಕುಮಾರ್ ಕುನ್ನತ್ ಸುಮಾರು ಒಂದೂವರೆ ಗಂಟೆ ಕಾಲ ಹಾಡಿದ್ದರು. ಕೃಷ್ಣಕುಮಾರ್ ಕುನ್ನತ್ ತಮಿಳು, ಮಲಯಾಳಂ, ಮರಾಠಿ, ಬೆಂಗಾಲಿ ಭಾಷೆಗಳಲ್ಲೂ ಹಾಡಿದ್ದಾರೆ. 1968ರ ಆಗಸ್ಟ್ 23ರಂದು ದೆಹಲಿಯಲ್ಲಿ ಜನಸಿದ್ದ ಕೃಷ್ಣ ಕುಮಾರ್ ಕುನ್ನತ್ ಅವರು ಕೆಕೆ ಎಂದು ಪ್ರಸಿದ್ಧರಾಗಿದ್ದರು. ಖ್ಯಾತ ಗಾಯಕ ಎ.ಆರ್ ರೆಹಮಾನ್ ಅವರು ಕುನ್ನತ್ ಅವರನ್ನ ಚಿತ್ರರಂಗಕ್ಕೆ ಪರಿಚಯ ಮಾಡಿಸಿದ್ದರು. ಇದನ್ನೂ ಓದಿ : – ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಇಳಿಕೆ