ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ರಾಜ್ಯದ ಮೊಟ್ಟ ಮೊದಲ ತೇಲುವ ಸೇತುವೆ ಉದ್ಘಾಟನೆಯಾದ 48 ಗಂಟೆಗಳ ಅವಧಿಯಲ್ಲೇ ಕಿತ್ತುಕೊಂಡು ಬಂದಿದೆ. ಪರಿಣಾಮ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ಬಂದ್ ಮಾಡಲಾಗಿದೆ.
ಉಡುಪಿಯ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಆಕರ್ಷಿಸಲು ಇತ್ತೀಚೆಗಷ್ಟೇ ತೇಲುವ ಸೇತುವೆಯನ್ನು ವ್ಯವಸ್ಥೆಗೊಳಿಸಲಾಗಿತ್ತು. ಇದು ಕರ್ನಾಟಕ ರಾಜ್ಯದಲ್ಲೇ ಪ್ರಥಮ ತೇಲುವ ಸೇತುವೆ(Karnataka’s first floating bridge) ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಆದರೀಗ ಈ ತೇಲುವ ಸೇತುವೆ ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಕಿತ್ತುಕೊಂಡು ಬಂದಿದೆ. ಇದನ್ನೂ ಓದಿ : – ಪ್ರತಿಯೊಂದಕ್ಕೂ ಜಾತಿ,ಧರ್ಮ,ಪಕ್ಷ ತರಬೇಡಿ – ಯು.ಟಿ ಖಾದರ್
ಹೀಗಾಗಿ ತೇಲುವ ಸೇತುವೆ ಬಳಿ ಪ್ರವಾಸಿಗರ ಪ್ರವೇಶ ಬಂದ್ ಮಾಡಲಾಗಿದೆ. ಭಾನುವಾರ ಸಂಜೆಯಿಂದಲೇ ತೇಲುವ ಸೇತುವೆ ಬಂದ್ ಆಗಿದೆ. ಕೇರಳದ ಬೇಪೋರ್ ಬೀಚ್ (kerala beypore beach) ಬಿಟ್ಟರೆ ದೇಶದ ಬೇರೆಲ್ಲೂ ಈ ರೀತಿಯ ತೇಲುವ ಸೇತುವೆ ಇರಲಿಲ್ಲ. ಕೆಲವೊಂದು ಹಿನ್ನೀರಿನ ಪ್ರದೇಶಗಳಲ್ಲಿ ಈ ಥರದ ಸೇತುವೆ ಅಳವಡಿಸಿದ್ದರೂ ಸಮುದ್ರದ ಅಲೆಗಳ ಮೇಲೆ ನಡೆದ ರೋಚಕ ಅನುಭವ ಅಲ್ಲಿ ಸಿಗುವುದಿಲ್ಲ.
ಇದನ್ನೂ ಓದಿ : – 2A ಮೀಸಲಾತಿಗಾಗಿ ಮುಖ್ಯಮಂತ್ರಿಗಳ ಮನೆಯ ಮುಂದೆ ಧರಣಿ ಸತ್ಯಾಗ್ರಹ ಮಾಡುತ್ತೇವೆ – ಜಯಮೃತ್ಯುಂಜಯ ಸ್ವಾಮೀಜಿ