ಮುಂದಿನ ವಿಧಾನಸಭೆಯಲ್ಲಿ ಶತಾಯಗತಾಯ 120 ಸ್ಥಾನಗಳನ್ನು ಗೆಲ್ಲುವ ಇಚ್ಚೆಯಿಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ (H.D KUMARASWAMY) ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ.
ಇತ್ತ ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ರೇವಣ (BHAVANI REVANNA)ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದು ಸಾಕಷ್ಟು ಸಂಕಷ್ಟ ತಂದಿದೆ. ಇಂದು ಹೆಚ್.ಡಿ ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಮಂತ್ರಾಲಯದ ರಾಯರ ಮಠಕ್ಕೆ ಭೇಟಿ ನೀಡಿದ್ದಾರೆ. ಮೊದಲು ಮಂಚಾಲಮ್ಮ ದೇವಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ, ಬಳಿಕ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇದನ್ನು ಓದಿ :- ಬೆಳ್ಳಿ ಬಂಗಾರ ಪದಕ ಗೆದ್ದುಕೊಟ್ಟಿದ್ದ `ಮೈಸೂರು ಹುಲಿ-193′ ಖ್ಯಾತಿಯ ಕೊಬ್ಬರಿ ಹೋರಿ ಸಾವು
ನಂತರ ಮಾತನಾಡಿದ ಕುಮಾರಸ್ವಾಮಿ, ಕಳೆದ 5 ದಿನಗಳಿಂದ ರಾಯಚೂರಿನಲ್ಲಿ ಪಂಚರತ್ನ ಕಾರ್ಯಕ್ರಮ ನಡೆಯುತ್ತಿದೆ. ರಥ ಯಾತ್ರೆ ಯಶಸ್ಸಿಗೆ ಹಲವಾರು ವರ್ಷಗಳ ಬಳಿಕ, ರಾಯರೇ ನನ್ನನ್ನು ಕರೆಸಿಕೊಂಡಿದ್ದಾರೆ. ರಾಯರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಹೊರಟಿದ್ದೇನೆ. ಅದಕ್ಕೆ ಅನುಗ್ರಹ ಕಲ್ಪಿಸಲು ಕೇಳಿಕೊಂಡಿದ್ದೇನೆ. ಸ್ವತಂತ್ರ ಸರ್ಕಾರವೇ ನನ್ನ ಗುರಿ. ಅದರ ಅನುಗ್ರಹಕ್ಕಾಗಿ ಕೇಳಿ ಕೊಂಡಿದ್ದೇನೆ. ಅನಿತಾ ಕುಮಾರಸ್ವಾಮಿ ಅವರು ರಾಯರ ಭಕ್ತರು ಎಂದು ಹೇಳಿದ್ರು.
ಹಾಲಲ್ಲಾದರು ಹಾಕು, ನೀರಲ್ಲಾದರು ಹಾಕು ಅಂತ ಅಷ್ಟೇ ಕೇಳಿಕೊಂಡಿದ್ದೇನೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ (ANITHA KUMARASWAMY) ಹೇಳಿದ್ದಾರೆ. ಜೀವನದಲ್ಲಿ ನನಗೆ ಒಳ್ಳೆಯದಾಗಿದ್ದರೇ ಅದು ರಾಯರಿಂದ. ನಿನಗೆ ಏನು ಮಾಡಬೇಕು ಅನ್ನಿಸುತ್ತೋ ಅದನ್ನ ಮಾಡು ಅಂತ ರಾಯರಲ್ಲಿ ಬೇಡಿದೆ ಎಂದು ಹೇಳಿದ್ರು.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಬೆಳಗ್ಗೆ ದಂಪತಿ ಸಮೇತರಾಗಿ ಮಂತ್ರಾಲಯಕ್ಕೆ ತೆರಳಿ ಶ್ರೀ ಗುರು ರಾಘವೇಂದ್ರ ಯತೀಂದ್ರರ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳ ಆಶೀರ್ವಾದವನ್ನು ಕುಮಾರಸ್ವಾಮಿ ದಂಪತಿ ಪಡೆದಿದ್ದಾರೆ. ಬಳಿಕ ಪೂಜ್ಯ ಶ್ರೀಗಳು ಕುಮಾರಸ್ವಾಮಿ ಅವರಿಗೆ ಮಂತ್ರಾಲಯದಲ್ಲಿ ನಡೆದಿರುವ ಅಭಿವೃದ್ಧಿಗಳ ಬಗ್ಗೆ ಮಾಹಿತಿ ನೀಡಿದ್ರು. ಗೋಶಾಲೆ, ಅನ್ನಪೂರ್ಣ ಪ್ರಸಾದ ನಿಲಯ, ಸಂಸ್ಕೃತ ವಿದ್ಯಾಪೀಠ, ಪರಿಮಳ ಪ್ರಸಾದ ಪಾಕಶಾಲೆ ಮುಂತಾದ ಕಡೆ ಶ್ರೀಗಳ ಜತೆ ಹೆಚ್ಡಿಕೆ ಭೇಟಿ ನೀಡಿದ್ರು.
ಇದನ್ನು ಓದಿ :- ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದಿದ್ದೀವಿ ಅಂತಾ ಫೋಸ್ ಕೊಡುತ್ತಿದ್ದಾರೆ – ಸಿಎಂ ಬೊಮ್ಮಾಯಿ