ಕನ್ನಡದ `ಕಾಂತಾರ’ಗೆ (Kantara) ಮತ್ತೊಂದು ಸಂಕಷ್ಟ ಎದುರಾಗಿದೆ. ಸಿನಿಮಾದ ‘ವರಾಹ ರೂಪಂ’ (Varaha Roopam) ಹಾಡಿನ ವಿರುದ್ಧ ಕೃತಿಚೌರ್ಯದ ಆರೋಪ ಮಾಡಿದ್ದ ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಹೊಂಬಾಳೆ ಬ್ಯಾನರ್, ರಿಷಬ್ ಶೆಟ್ಟಿ, ಪೃಥ್ವಿರಾಜ್ ಫಿಲ್ಮ್ಸ್, ಅಮೆಜಾನ್ ಸೆಲ್ಲರ್ ಸರ್ವೀಸ್ ಪ್ರೈವೇಟ್ ಲಿಮಿಟೆಡ್, ಗೂಗಲ್ ಇಂಡಿಯಾ ಹೆಡ್ ಆಫೀಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಇತರರಿಗೆ ಕೇರಳ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ : – ಕನ್ನಡದ `ಕಾಂತಾರ’ ಇಂದು ತುಳು ಭಾಷೆಯಲ್ಲಿ ರಿಲೀಸ್
ರಿಷಬ್ ಶೆಟ್ಟಿ ( RISHAB SHEETY ) ನಟಿಸಿ, ನಿರ್ದೇಶಿರುವ `ಕಾಂತಾರ’ ಚಿತ್ರದ `ವರಾಹ ರೂಪಂ’ ಹಾಡಿಗೆ ಕೃತಿಚೌರ್ಯದ ಆರೋಪ ಮಾಡಲಾಗಿತ್ತು. ಹೊಂಬಾಳೆ ಸಂಸ್ಥೆ ವಿರುದ್ಧ ವರಾಹ ರೂಪಂ ಹಾಡು ಬಳಸಿದಕ್ಕಾಗಿ ಥೈಕ್ಕುಡಂ ಬ್ರಿಡ್ಜ್ ಸಲ್ಲಿಸಿದ್ದ ಅರ್ಜಿಯನ್ನು ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ವಜಾ ಮಾಡಿ ಆದೇಶಿಸಿತ್ತು. ಈ ಆದೇಶಕ್ಕೆ ಕೇರಳ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.
ಇದನ್ನೂ ಓದಿ : – ಸಮಂತಾ ಬಳಿಕ ಪೂನಂ ಕೌರ್ಗೆ ಅಂಟಿತು ವಿಚಿತ್ರ ಕಾಯಿಲೆ – ಮೆದುಳಿನ ಮೇಲೂ ಬೀರುತ್ತೆ ಪರಿಣಾಮ