ಸಾವಿರದ ಗಡಿ ದಾಟಿದ ಅಡುಗೆ ಅನಿಲ ಬೆಲೆ – ಇಂದು ಮತ್ತೆ ಮೂರುವರೆ ರೂಪಾಯಿ ಹೆಚ್ಚಳ

ದಿನ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ.

Domestic LPG cylinders gets costlier by Rs 50 - BusinessToday

ಈ ಮೂಲಕ ಇಂದಿನಿಂದ ಗೃಹಬಳಕೆಯ ಸಿಲಿಂಡರ್ ಬೆಲೆ 1003 ರೂಪಾಯಿ ಆಗಿದೆ. ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಬೆಲೆಯನ್ನು 8 ರೂಪಾಯಿ ಹೆಚ್ಚಿಸಲಾಗಿದೆ. ಈಗ, 14.2 ಕೆಜಿ ಅಡುಗೆ ಅನಿಲ ಸಿಲಿಂಡರ್‌ ಬೆಲೆ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಸಾವಿರ ರೂಪಾಯಿ ಗಡಿ ಮೀರಿದೆ.

Commercial LPG cylinder price hiked by Rs 102 | Deccan Herald

ಒಂದು ತಿಂಗಳ ಅವಧಿಯಲ್ಲಿ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆ ಏರಿಕೆಯಾಗುತ್ತಿರುವುದು ಇದು ಎರಡನೇ ಬಾರಿ. ಈ ಹಿಂದೆ ಮೇ 8 ರಂದು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಮೇ 7 ರಂದು ಪ್ರತಿ ಸಿಲಿಂಡರ್‌ಗೆ 10 ರೂಪಾಯಿ ಹೆಚ್ಚಿಸಲಾಗಿತ್ತು. ಇದನ್ನೂ ಓದಿ :- ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆಯಿಂದ ಪಕ್ಷಕ್ಕೆ ಆನೆ ಬಲ ಬಂದಿದೆ- ಸಿಎಂ ಬೊಮ್ಮಾಯಿ

All you need to know about LPG cylinders - Pune Gas

14.2 ಕೆಜಿ LPG ಸಿಲಿಂಡರ್ ಈಗ ದೆಹಲಿಯಲ್ಲಿ 1003 ರೂ, ಕೋಲ್ಕತ್ತಾದಲ್ಲಿ ಪ್ರತಿ ಸಿಲಿಂಡರ್‌ಗೆ 1029 ರೂಪಾಯಿಗೆ ದರವನ್ನು ಪರಿಷ್ಕರಿಸಲಾಗಿದೆ. ದರ ಏರಿಕೆಯ ನಂತರ ಚೆನ್ನೈ ಸಿಲಿಂಡರ್ ಬೆಲೆ 1018.5 ರೂಪಾಯಿ ಆಗಿದೆ. ಮುಂಬೈನಲ್ಲಿ ಹೊಸ ದರ 1003 ರೂಪಾಯಿ ಆಗಿದೆ. ಇದನ್ನೂ ಓದಿ : – ಶ್ರೀಲಂಕಾದಂತೆಯೇ ಭಾರತ ಕಾಣಿಸುತ್ತಿದೆ – ಹೋಲಿಕೆ ಮಾಡಿ ವ್ಯಂಗ್ಯವಾಡಿದ ರಾಹುಲ್ ಗಾಂಧಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!