ಕೋವಿಡ್ 19 ಸೋಂಕು ಪ್ರಕರಣಗಳ ಏರಿಕೆ ನಡುವೆ ಮಂಕಿಪಾಕ್ಸ್ ಸೋಂಕು ಭೀತಿಯೂ ಶುರುವಾಗಿದ್ದು, ರಾಜ್ಯ ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.
ಈ ಕುರಿತಾಗಿ ಅವರು ಟ್ವೀಟ್ ಮಾಡಿದ್ದು, ವಿಶ್ವದ ಹಲವೆಡೆ ಮಂಕಿಪಾಕ್ಸ್ ಸೋಂಕು ಹರಡುತ್ತಿರುವುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ರಾಜ್ಯದಲ್ಲಿ, ಕಾಯಿಲೆಯ ಮುನ್ಸೂಚನೆ ಕಂಡ ಕೂಡಲೇ ಸ್ಕ್ರೀನಿಂಗ್, ಎಲ್ಲ ಜಿಲ್ಲೆಗಳಲ್ಲಿ ಆಸ್ಪತ್ರೆ ಬೆಡ್ಗಳನ್ನು ಕಾಯ್ದಿರಿಸುವುದು, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್, ಸೇರಿದಂತೆ ಹಲವು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : – ಒಂದು ವಾರದಲ್ಲಿ ಪಠ್ಯವನ್ನು ಪಬ್ಲಿಕ್ ಡೊಮೈನ್ ನಲ್ಲಿ ಇಡ್ತೀವಿ – ಬಿ.ಸಿ ನಾಗೇಶ್