ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಇಳಿದಿದ್ದ ಬಾಲಕರಿಬ್ಬರು ನೀರುಪಾಲಾಗಿರುವ ಘಟನೆ ಬೆಂಗಳೂರಿನ ಕೋಣನಕುಂಟೆ(KONANAKUNTE) ಯಲ್ಲಿ ನಡೆದಿದೆ.
ಇಂದು ಮಧ್ಯಾಹ್ನ 3 ಘಂಟೆ ಸುಮಾರಿಗೆ ಅನ್ನಪೂರ್ಣೇಶ್ವರಿ ಲೇಔಟ್ ನ MNC ಅಕಾಡೆಮಿಯಲ್ಲಿ ಈಜು ತರಬೇತಿ ನಡೆಯುತ್ತಿತ್ತು. ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಮಾರು 10-11 ವರ್ಷ ವಯಸ್ಸಿನ ಇಬ್ಬರು ಬಾಲಕರು 100 ರೂಪಾಯಿ ಕೊಟ್ಟು ಈಜಲು ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನು ಓದಿ :- ಲಕ್ಷ್ಮಿ ವಿರುದ್ಧ ರಮೇಶ್ ಜಾರಕಿಹೊಳಿ ವಿಷ ಕನ್ಯೆ ಪದ ಬಳಕೆಗೆ ಚನ್ನರಾಜ ಹಟ್ಟಿಹೊಳಿ ಆಕ್ಷೇಪ