ಆಡಿಯೋದಲ್ಲಿ ಇರುವ ಧ್ವನಿ ನನ್ನದೆ – ಸಚಿವ ಮಾಧುಸ್ವಾಮಿ

ಸಚಿವ ಮಾಧುಸ್ವಾಮಿ ( maadhuswamy ) ಆಡಿಯೋ ಲೀಕ್ ಕುರಿತಂತೆ ಚಿಕ್ಕನಾಯಕನಹಳ್ಳಿಯ ಜೆ.ಸಿ.ಪುರದಲ್ಲಿ ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಆಡಿಯೋ ತುಂಬಾ ಹಳೆಯದು. ಯಾವಾಗ ಮಾತನಾಡಿದ್ದೀನಿ ಅನ್ನೋದು ನನಗೆ ನೆನಪಿಲ್ಲ. ಆಡಿಯೋದಲ್ಲಿ ಇರುವ ಧ್ವನಿ ನನ್ನದೆ ಎಂದು ಒಪ್ಪಿಕೊಂಡಿದ್ದಾರೆ. ಆಡಿಯೋ ರೆಕಾರ್ಡಿಂಗ್ ಮಾಡಿದ ವ್ಯಕ್ತಿ ವಿರುದ್ಧ ದೂರು ನೀಡುತ್ತೇನೆ. ಗೊತ್ತಿಲ್ಲದೇ ಕಾಲ್ ರೆಕಾರ್ಡ್ ( call record ) ಮಾಡೋದು ಕೂಡ ಅಪರಾಧ. ಹಾಗಾಗಿ ಪ್ರಸಾರ ಮಾಡಿದ ಮಾಧ್ಯಮದ ಮೇಲೂ ಕೇಸ್ ಹಾಕುತ್ತೇನೆ ಎಂದು ಹೇಳಿದ್ದಾರೆ. ಅಪರಿಚಿತ ವ್ಯಕ್ತಿಯ ದಾಖಲೆ ಮಾಧ್ಯಮದವರು ನೀಡಲಿ ಎಂದು ಆಗ್ರಹಿಸಿದ್ದಾರೆ.

ಯಾರೂ ನನ್ನ ವಿರುದ್ಧ ಷಡ್ಯಂತ್ರ ಮಾಡಿಲ್ಲ. ಯಾರನ್ನೂ ನಾನು ದೂಷಣೆ ಮಾಡೋದಿಲ್ಲ. ಈಗಾಗಲೇ ಸಿಎಂಗೆ ಸ್ಪಷ್ಟನೆ ನೀಡಿದ್ದೇನೆ. ಸಿಎಂ ರಾಜೀನಾಮೆ ಕೇಳಿದರೆ ರಾಜೀನಾಮೆ ಕೊಡುತ್ತೇನೆ. ಅನಾಮಿಕ ವ್ಯಕ್ತಿ ನನ್ನ ಪ್ರವೋಕ್ ಮಾಡಿದ್ದ. ಹಾಗಾಗಿ ನಾನು ಮ್ಯಾನೇಜ್ ಮಾಡುತಿದ್ದೇವೆ ಎಂದು ಹೇಳಿದೆ. ಸಚಿವ ಸೋಮಶೇಖರ್ ಕುರಿತು ನಾನು ಗೌರವಯುತವಾಗಿ ಮಾತನಾಡಿದ್ದೇನೆ. ಸರ್ಕಾರ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಸರ್ಕಾರದ ಬಗ್ಗೆ ಎರಡು ಮಾತಿಲ್ಲ. ಸಿಎಂ ಬೊಮ್ಮಾಯಿ ( basacaraj bommai )ಉತ್ತಮ ಕೆಲಸ ಮಾಡುತಿದ್ದಾರೆ. ಸಿಎಂ ಬದಲಾವಣೆಯೂ ಇಲ್ಲ, ಸಚಿವ ಸಂಪುಟ ಪುನಾರಚನೆ ಆಗೋದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : – ಬಿಹಾರ ಸಂಪುಟ ಸಚಿವರಿಗೆ ಖಾತೆ ಹಂಚಿಕೆ- ಗೃಹ ಖಾತೆ ಉಳಿಸಿಕೊಂಡ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಗೆ ಆರೋಗ್ಯ, ರಸ್ತೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!